ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ದಾವಣಗೆರೆ:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್ ವ್ಯಾಸಂಗ ಮಾಡುತ್ತಿರುವ ಹಾಗೂ ಎನ್‍ಎಸ್‍ಪಿ ನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.

       ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಲು ಇಲಾಖೆ ವೆಬ್ ಸೈಟ್ : dom.karnataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕೆ https://ssp.postmatric.karnataka.gov.in ವೆಬ್ ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳು ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಸ್ವೀಕೃತಿ ಪತ್ರವನ್ನು ವ್ಯಾಸಂಗ ಮಾಡುತ್ತಿರುವ ಕಾಲೇಜಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕೇಂದ್ರದ ದೂರವಾಣಿ ಸಂಖ್ಯೆ 08192-250022 ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link