ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ದೇಶದ ಜನರಿಗೆ ಕೊಂಚ ನಿಟ್ಟುಸಿರು ಬಿಡುವ ಸುದ್ದಿ; ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 3,06,064 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.20.75ಕ್ಕೆ ಏರಿಕೆಯಾಗಿದೆ

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 439 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

       ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 489848 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2249335 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 243495 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 36804145 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 27,56,364 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,62,26,07,516 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 14,74,753 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link