![ದಾವಣಗೆರೆಯಲ್ಲಿ ತಡರಾತ್ರಿ ದಂಪತಿಯ ಭೀಕರ ಕೊಲೆ! ಬೆಚ್ಚಿಬಿದ್ದ ಸ್ಥಳೀಯರು](https://assets-news-bcdn.dailyhunt.in/cmd/resize/600x400_90/fetchdata16/images/21/1a/bb/211abbd017272548664b2f96516a8c6504bdc77ca72ddf0590e9a20acc15c392.webp)
ಎಲೆಬೇತೂರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಗುರುಸಿದ್ದಯ್ಯ (80) ಮತ್ತು ಇವರ ಪತ್ನಿ ಸರೋಜಮ್ಮ (75) ಕೊಲೆಯಾದ ದಂಪತಿ.
ಗ್ರಾಮದ ಮನೆಯಲ್ಲಿ ಪತಿ-ಪತ್ನಿ ಇಬ್ಬರೇ ವಾಸವಿದ್ದರು. ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದು, ಮದುವೆ ಮಾಡಿದ್ದರು.
ಸೋಮವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಂಪತಿಯನ್ನು ಮಾಸಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಒಳಗೆ ಶವ ಬಿಟ್ಟು ಹೊರಗಿನಿಂದ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಪಕ್ಕದ ಮನೆಯವರು ಸರೋಜಮ್ಮರನ್ನ ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿದೆ. ಕೊಲೆಗಾರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ದಂಪತಿ ಹತ್ಯೆ ಗ್ರಾಮಸ್ಥರಲ್ಲಿ ಭಯದ ವಾತಾವಾರಣ ಸೃಷ್ಟಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/01/Capture-34.jpg)