ಚಿಕ್ಕೋಡಿ:
ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ ಹೇಳುವಾಗ ಹಿರಿಯ ಪತ್ರಕರ್ತ ಅಬ್ದುಲ್ ರಜಾಕ್ ಅರಳಿಕಟ್ಟಿ (8೦) ಹೃಯದಾಘಾತದಿಂದ ನಿಧನರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಧ್ವಜಾರೋಹಣ ನೆರವೇರಿಸಿ ಎಲ್ಲರೊಡನೆ ಇವರು ರಾಷ್ಟ್ರಗೀತೆ ಹೇಳುತ್ತಿದ್ದರು.
ಆಗ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಇವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅವರು ಆಗಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ಗಣರಾಜ್ಯೋತ್ಸವ ಆಯೋಜಿಸಲಾಗಿತ್ತು. ಸ್ಥಳೀಯ ಪತ್ರಿಕೆಯೊಂದರ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಬ್ದುಲ್ ರಜಾಕ್ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಆಗ ಈ ಘಟನೆ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ