ಸಮವಸ್ತ್ರ ಕಡ್ಡಾಯ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ. ಕುಂದಾಪುರದ ಕಾಲೇಜಿನ ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಗೇಟ್ ಹಾಕಿರುವುದು ಸಂವಿಧಾನ ವಿರೋಧಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು.
ಅವರು ಯಾರೋ ಕೇಸರಿ ಶಾಲು ಹಾಕಿಕೊಂಡು ಬಂದಿದ್ದರಲ್ಲ, ಅವರ ವಿರುದ್ದ ಏನೋ ಕ್ರಮ? ಇದನ್ನೆಲ್ಲಾ ಬಿಜೆಪಿಗರು ಮಾಡಿಸುತ್ತಿದ್ದಾರೆ ಎಂದರು.
ವಿದ್ಯಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಏನಾಗುತ್ತದೆ ನೋಡೋಣ. ವೈಯಕ್ತಿಕವಾಗಿ ಹೇಳುವುದಾದರೆ ಹಿಜಾಬ್ ವಿದ್ಯಾರ್ಥಿನಿಯರ ಮೂಲಭೂತ ಹಕ್ಕು. ಅವರ ವಿದ್ಯಾಭ್ಯಾಸ ತಡೆಗಟ್ಟುವ ಪ್ರಯತ್ನ ನಡೆಯುತ್ತಿದೆ ಎಂದರು.
ಕುಂದಾಪುರದ ಜೂನಿಯರ್ ಕಾಲೇಜು ನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗಳಿಗೆ ಪ್ರವೇಶ ನಿರಾಕರಣೆ ಮಾಡಿದ ಕಾರಣಕ್ಕಾಗಿ ಶಾಲೆಗೆ ಪೋಷಕರು ಮುತ್ತಿಗೆ ಹಾಕಿದ ಘಟನೆ ಶುಕ್ರವಾರ ನಡೆದಿದೆ. ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಬೈಂದೂರಿನಲ್ಲೂ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಬಂದ ಘಟನೆ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ