ತಿಪಟೂರು: ರಾಜ್ಯದಲ್ಲಿ ಮುಸ್ಲಿಂ ಯುವತಿಯರು ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಬರುತ್ತಿರುವ ಹಾಗೂ ಇದಕ್ಕೆ ವಿರುದ್ಧವಾಗಿ ಹಿಂದೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕೇಸರಿ ಶಲ್ಯವನ್ನು ಹಾಕಿಕೊಂಡು ಕಾಲೇಜುಗಳಿಗೆ ಬರುತ್ತಿದ್ದಾರೆಂದು ಪತ್ರಿಕೆ, ಟಿವಿ, ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಿದ್ದ ಜನರಿಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಲ್ಯ ಧಾರಿಗಳಾಗಿ ಬಂದದ್ದನ್ನು ನೋಡುವಂತಾಯಿತು.
ಸೋಮವಾರ ಬೆಳಗ್ಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಒರ್ವ ಮುಸ್ಲಿಂ ಯುವತಿ ಬುರ್ಕಾವನ್ನು ಧರಿಸಿ ಕಾಲೇಜಿನ ಒಳಗೆ ಹೋಗುವುದನ್ನು ನೋಡಿದ ಹಿಂದೂ ವಿದ್ಯಾರ್ಥಿಗಳು ಅದನ್ನು ವಿಡಿಯೋ ಸಹ ಮಾಡಿಕೊಂಡು ನಂತರ ಹಲವಾರು ವಿದ್ಯಾರ್ಥಿಗಳೊಂದಿಗೆ ಕೇಸರಿ ಶಾಲನ್ನು ಧರಿಸಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಕಾಲೇಜಿನ ಒಳಗೆ ಪ್ರವೇಶಿಸಿದರು. ಸೂಕ್ತ ಸಮಯಕ್ಕೆ ಪೊಲೀಸರು ಬಂದು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ