ರಾಜ್ಯ ಸರ್ಕಾರದಿಂದ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗಾಗಿ ಹಾಸಿಗೆ ಮೀಸಲಿಡುವ ಆದೇಶ ವಾಪಾಸ್

ಬೆಂಗಳೂರು:

        ಮೂರನೇ ಅಲೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು  ಕೋವಿಡ್ ಚಿಕಿತ್ಸೆಗಾಗಿ ನಿರ್ದಿಷ್ಟ ಸಂಖ್ಯೆಯ ಹಾಸಿಗೆಗಳನ್ನು ಮೀಸಲಿಡಬೇಕಾದ ಸುತ್ತೋಲೆಯನ್ನು ಸರ್ಕಾರ ಹಿಂತೆಗೆದುಕೊಂಡಿದೆ.

            ಈ ಕುರಿತಂತೆ ಟ್ವಿಟ್ಟರ್ ನಲ್ಲಿ  ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿನ  ಪ್ರಕರಣಗಳ ಸಂಖ್ಯೆ ಇಳಿಕೆಗೊಂಡಿದೆ. ಕೇಸ್ ಗಳ ಸಂಖ್ಯೆ ಇಳಿಕೆಯ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಇಳಿಕೆ ಕಂಡಿದೆ.

ಈ ಎಲ್ಲಾ ಕಾರಣದಿಂದಾಗಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಬೆಡ್ ಗಳನ್ನು ಮೀಸಲಿಡುವಂತೆ ಹೊರಡಿಸಿದ್ದಂತ ಆದೇಶವನ್ನು ಸರ್ಕಾರ ವಾಪಾಸ್ ಪಡೆದಿರೋದಾಗಿ ತಿಳಿಸಿದ್ದಾರೆ.

          ಜನರ ನಡುವೆ ದ್ವೇಷ ಉಂಟು ಮಾಡುವ, ಸಮಾಜದಲ್ಲಿ ಶಾಂತಿ ಕದಡುವಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅಪರಾಧಕ್ಕಾಗಿ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್  ರವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಬಿಜೆಪಿ ಕಾನೂನು ಪ್ರಕೋಷ್ಠದ ವತಿಯಿಂದ ಕರ್ನಾಟಕ ಡಿಜಿಪಿ ಮತ್ತು ಐಜಿಪಿ ರವರಿಗೆ ಇಂದು ದೂರು ಸಲ್ಲಿಸಲಾಯಿತು, ಶಿವಕುಮಾರ್ ರವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಂಡು ಇನ್ನು ಮುಂದೆ ಅವರು ಈ ರೀತಿ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡದಂತೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿದೆ.

ಹಿಂಸೆ, ದ್ವೇಷ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಮಾದರಿಯ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಕಾನೂನು ಪ್ರಕೋಷ್ಠ ಆಕ್ಷೇಪಿಸಿದೆ.

ದೂರು ನೀಡುವ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕೋಶಾಧ್ಯಕ್ಷರಾದ ಸುಬ್ಬನರಸಿಂಹ, ಬೆಂಗಳೂರು ದಕ್ಷಿಣ ಜಿಲ್ಲೆ ಕಾನೂನು ಪ್ರಕೋಷ್ಠದ ಸಂಚಾಲಕರಾದ ಯಶವಂತ್ ಎಂ ಮತ್ತು ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರಾದ ವಿನೋದ್ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link