ಬೆಂಗಳೂರ:
ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಿಕ್ಷಣ ಸಂಸ್ಥೆಗಳು ಪುನಾರಂಭವಾಗಬೇಕು.
ಪ್ರಕರಣ ಬಾಕಿ ಇರುವವರೆಗೆ ವಿದ್ಯಾರ್ಥಿಗಳು ಮತ್ತು ಸಂಬಂಧಪಟ್ಟವರು ಯಾವುದೇ ತೆರನಾದ ಧಾರ್ಮಿಕ ಉಡುಪು ಅಥವಾ ಶಿರ ವಸ್ತ್ರ ಹಾಕಬಾರದು ಎಂದು ನಾವು ಆದೇಶ ಮಾಡುತ್ತೇವೆ.
ಎಲ್ಲರನ್ನೂ ನಾವು ನಿರ್ಬಂಧಿಸುತ್ತೇವೆ. ಶಾಂತಿ ಮತ್ತು ನೆಮ್ಮದಿ ಮುಖ್ಯ ಎಂದು ಹೈಕೋರ್ಟ್ ಹೇಳಿದ್ದು ವಿಚಾರಣೆಯನ್ನು ಸೋಮವಾರ ಮದ್ಯಾಹ್ನಕ್ಕೆ ಮುಂದೂಡಿದೆ.
ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು ಮಧ್ಯಾಹ್ನ ಆರಂಭವಾಗಿದ್ದು, ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
