ಹಿಜಾಬ್​-ಕೇಸರಿ ಸಂಘರ್ಷ: ವಿದ್ಯಾರ್ಥಿಯಿಂದ ಆತ್ಮಹತ್ಯೆಗೆ ಯತ್ನ

ಕೊಡಗು:

   ರಾಜ್ಯದಲ್ಲಿ ವಿಕೋಪಕ್ಕೆ ತೆರಳಿರುವ ಹಿಜಾಬ್​-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ.

ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ ಪ್ರಜ್ವಲ್​ (18) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ.

ಕೇಸರಿ ಶಾಲು ಧರಿಸಿದ್ದಕ್ಕೆ ಈತನ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ ಹೊರಿಸಿದ್ದಷ್ಟೇ ಅಲ್ಲದೆ ಹಲ್ಲೆಯನ್ನೂ ಮಾಡಿತ್ತು. ಇದರಿಂದ ನೊಂದು ಈತ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ.

ಅನ್ಯಕೋಮಿನ ಏಳು ವಿದ್ಯಾರ್ಥಿಗಳು ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಿದ್ದರೂ ನ್ಯಾಯ ಸಿಕ್ಕಿಲ್ಲ. ಒಬ್ಬನನ್ನು ಮಾತ್ರ ವಿಚಾರಣೆ ನಡೆಸಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿಗಳು ನನ್ನನ್ನು ದೂರ ಇಟ್ಟಿದ್ದಾರೆ.

ಹಾಸ್ಟೆಲ್ ವಾರ್ಡನ್ ಕೂಡ ಅಪರಾಧಿ ಸ್ಥಾನದಲ್ಲಿರಿಸಿ ನೋಡುತ್ತಾರೆ. ತಾಯಿಗೆ ಕರೆ ಮಾಡಿ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ನನ್ನ ಮೇಲೆ ಹಲ್ಲೆ ನಡೆದಿದ್ದರೂ ನನ್ನನ್ನೇ ಅಪರಾಧಿ ಸ್ಥಾನದಲ್ಲಿಟ್ಟಿದ್ದಾರೆ ಎಂದು ಪೊಲೀಸರ ಮುಂದೆ ಈ ವಿದ್ಯಾರ್ಥಿ ಹೇಳಿಕೊಂಡಿದ್ದಾನೆ.

ಮಂಗಳವಾರ ಈತನ ಮೇಲೆ ಹಲ್ಲೆ ನಡೆದಿತ್ತು. ನಿನ್ನೆ ಸ್ನೇಹಿತರಿಗೆ ಕರೆ ಮಾಡಿದ್ದ ವಿದ್ಯಾರ್ಥಿ, ಅವರಿಗೆ ವಿಷಯ ತಿಳಿಸಿ ವಿಷ ಸೇವಿಸಿದ್ದ. ಬಳಿಕ ಸ್ನೇಹಿತರು ಈತನನ್ನು ಹುಡುಕಿ ಆಸ್ಪತ್ರೆಗೆ ಸೇರಿಸಿದ್ದಾರೆ.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link