ಹಿಜಾಬ್ ಧರಿಸಿ ತರಗತಿಗೆ ಹಾಜರಾದ ವಿದ್ಯಾರ್ಥಿನಿಯರು: ಒತ್ತಡಕ್ಕೆ ಸಿಲುಕಿದ ಶಿಕ್ಷಕರು

ವಿಜಯಪುರ:

ಹೈಕೋರ್ಟ್ ಮಧ್ಯಂತರ ನಿರ್ದೇಶನದ ಮಧ್ಯೆಯೂ ವಿಜಯಪುರ ‌ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಹಿಜಾಬ್- ಕೇಸರಿ ಶಾಲು ವಿವಾದ ತಾರಕಕ್ಕೇರಿದೆ.

ಬುಧವಾರ ವಿಜಯಪುರ ನಗರದ ಸರ್ಕಾರಿ ಪದವಿ ಪೂರ್ವ, ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗಳಿಗೆ ಹಾಜರಾಗಿದ್ದಾರೆ.

   ವಿದ್ಯಾರ್ಥಿನಿಯರು ಹೈಕೋರ್ಟ್ ಹಾಗೂ ಸರ್ಕಾರ ನೀಡಿರುವ ವಸ್ತ್ರ ಸಂಹಿತೆ ಪಾಲಿಸಬೇಕೆಂದು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಮಾಡಿದ ಮನವಿಗೆ ವಿದ್ಯಾರ್ಥಿನಿಯರು ಸ್ಪಂದಿಸದೇ ಹಿಜಾಬ್ ಧರಿಸಿಯೇ ತರಗತಿಯಲ್ಲಿ ಕುಳಿತಿದ್ದಾರೆ. ಯಾವುದೇ ಕಾರಣಕ್ಕೂ ತಾವು ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಸಮವಸ್ತ್ರ ಧರಿಸಿ ತರಗತಿಗಳಲ್ಲಿ ಕುಳಿತ ವಿದ್ಯಾರ್ಥಿನಿಯರ ಜೊತೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ತರಗತಿಯಲ್ಲಿ ಕುಳಿತಿದ್ದು, ಈ ನಡೆಯಿಂದ ಶಿಕ್ಷಕರು ಒತ್ತಡಕ್ಕೆ ಸಿಲುಕಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link