ಬ್ರೆಜಿಲ್ :
ಬ್ರೆಜಿಲ್ ನ ರಿಯೋ ಡಿ ಜನೈರೊ ರಾಜ್ಯದ ಪರ್ವತ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ ಹಾಗೂ ಭೂಕುಸಿತದಿಂದ 94 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಸತ್ತವರ ಸಂಖ್ಯೆ ಹೆಚ್ಚುತ್ತಲೇ ಇರಬಹುದು ಎಂದು ನಗರದ ಮೇಯರ್ ರೂಬೆನ್ಸ್ ಬೊಂಟೆಂಪೊ ಹೇಳಿದರು.
ರಿಯೋ ಡಿ ಜನೈರೊ ರಾಜ್ಯ ಗವರ್ನರ್ ಕ್ಲಾಡಿಯೊ ಕ್ಯಾಸ್ಟ್ರೊ ವರದಿಗಾರರಿಗೆ ಹೇಳಿದ್ದು ಪರಿಸ್ಥಿತಿ ಬಹುತೇಕ ಯುದ್ಧದಂತೆ ಇದೆ. ಪ್ರವಾಹ ಪರಿಸ್ಥಿತಿಯಿಂದಾಗಿ ಹಲವಾರು ಮನೆಗಳು ನಾಶವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
