ಬೆಂಗಳೂರು :

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, 16 ಸಾವಿರ ಪೊಲೀಸ್, 17 ಸಾವಿರ ಶಿಕ್ಷಕರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್, 17 ಸಾವಿರ ಶಿಕ್ಷಕರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, 2017-18 ರಲ್ಲಿ ವೇತನ ಪರಿಷ್ಕರಣೆ ಮಾಡಲಾಗಿತ್ತು. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು.
ಮುಂದಿನ ಬಜೆಟ್ ನಲ್ಲಿ ಆರ್ಥಿಕ ಪರಿಸ್ಥಿತಿ ನೋಡಿ ವೇತನ ಪರಿಷ್ಕರಣೆ ನಿರ್ಧಾರ. 2022-23 ರ ಬಜೆಟ್ ನಲ್ಲಿ ವೇತನ ಆಯೋಗ ರಚನೆ ಬಗ್ಗ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








