ಚಿಕ್ಕಮಗಳೂರು :
ಚಿಕ್ಕಮಗಳೂರು ತಾಲೂಕಿನ ಇಂದಾವರ ಶಾಲೆಯಲ್ಲಿ ಹಿಜಾಬ್ಗಾಗಿ ಗಲಾಟೆ ನಡೆದಿತ್ತು. ಶಾಲೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಭೇಟಿ ನೀಡಿ, ಶಾಲಾ ಮಕ್ಕಳಿಗೆ ಪಾಠ ಮಾಡಿರುವ ಘಟನೆ ನಡೆದಿದೆ.
ಶಾಲೆಯ ಎಲ್ಲ ಮಕ್ಕಳಿಗೆ ಡಿಸಿ, ಎಸ್ಪಿ, ಸಿಇಓ ಪಾಠ ಮಾಡಿದ್ದಾರೆ. ಡಿಸಿ-ಎಸ್ಪಿ ಮಕ್ಕಳಿಗೆ ಗಣಿತ ಪಾಠ ಮಾಡಿದರೆ, ಜಿಲ್ಲಾ ಪಂಚಾಯಿತಿಯ ಸಿಇಒ ಸಮಾಜ ವಿಜ್ಞಾನ ಪಾಠ ಮಾಡಿದ್ದಾರೆ.
ನಿನ್ನೆ ಪೋಷಕರು – ಮಕ್ಕಳು ಶಾಲೆ ಬಳಿ ಗಲಾಟೆ ಮಾಡಿದ್ದರು. ಹಿಗಾಗಿ ಡಿಡಿಪಿಐ ಮಲ್ಲೇಶಪ್ಪ ಶಾಲೆಗೆ ತುರ್ತು ರಜೆ ನೀಡಿದ್ದರು. ಇಂದು ಅದೇ ಶಾಲೆಗೆ ಡಿಸಿ, ಎಸ್ಪಿ, ಸಿಇಓ ಭೇಟಿ ನೀಡಿ ಮಕ್ಕಳಿಗೆ ಪಾಠ ಮಾಡಿದ್ದು ವಿಶೇಷವಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ