ಬೆಂಗಳೂರು:
ಇಂದು ಸದನ ಆರಂಭವಾಗುತ್ತಿದ್ದಂತೆ ಆಡಳಿತ, ವಿಪಕ್ಷಗಳ ಗಲಾಟೆ ಜೋರಾಗಿದ್ದು, ಆ ಕಾರಣಕ್ಕಾಗಿ ವಿಧಾನಪರಿಷತ್ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.
ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪಟ್ಟು ಹಿಡಿದರು.
ಇದರಿಂದ ವಾಗ್ವಾದ ಏರ್ಪಟ್ಟಿತು. ಈ ವೇಳೆ ಕಾಂಗ್ರೆಸ್ ಪಕ್ಷದ ಸದಸ್ಯರು, ಸಚಿವ ಈಶ್ವರಪ್ಪ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆಗ ಬಿಜೆಪಿ ಸದಸ್ಯರು ಸದನದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಹೀಗೆ ಗದ್ದಲ-ಕೋಲಾಹಲ ಆರಂಭವಾಗುತ್ತಿದ್ದಂತೆ ಸಭಾಪತಿ ಹೊರಟ್ಟಿ ಅವರು ವಿಧಾನಪರಿಷತ್ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
