ಬೆಂಗಳೂರು:
ಭವಿಷ್ಯದಲ್ಲಿ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ, ಕಾಂಗ್ರೆಸ್ ನಾಯಕರ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ.
ರಾಷ್ಟ್ರಧ್ವಜ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಅಹೋರಾತ್ರಿ ಧರಣಿ ಮುಂದುವರೆಯುತ್ತಿದೆ.
ಸಚಿವ ಕೆ ಎಸ್ ಈಶ್ವರಪ್ಪರನ್ನು ವಜಾಗೊಳಿಸಲು ಕಳೆದ ಗುರುವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ಹೋರಾಟ 5ನೇ ದಿನಕ್ಕೂ ಕಾಲಿಟ್ಟಿದೆ.
ಇದಕ್ಕೆ ಉತ್ತರ ಸಿಗುವವರೆಗೂ ಪ್ರತಿಭಟನೆ ಮುಂದುವರಿಸಲಿದೆ ಎಂದು ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ