ಬೆಂಗಳೂರು :
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ
ವೇತನ ಹಾಗೂ ಭತ್ಯೆಯನ್ನು ಹೆಚ್ಚಳ ಮಾಡುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿದ್ದು, ಬಜೆಟ್ ನಲ್ಲಿ ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಭರವಸೆ ನೀಡಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ 4,500 ರೂ. ಹಾಗೂ ರಾಜ್ಯ ಸರ್ಕಾರ 7,300 ರೂ. ಸೇರಿಸಿ ವೇತನ ಕೊಡುತ್ತಿದೆ. ಇದನ್ನು ಇನ್ನೂ ಹೆಚ್ಚು ಮಾಡಲು ಯತ್ನಿಸಲಾಗುವುದು ಎಂದು ಹೇಳಿದ್ದಾರೆ.
ವೇತನ ಹಾಗೂ ಭತ್ಯೆ ಹೆಚ್ಚಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರಯ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ