ಹುಬ್ಬಳ್ಳಿ:
ಕುಂದಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಕುರುಬರಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಬೇಕು ಎಂದು ಆಗ್ರಹಿಸಿ ಕನಕಸೇವಾ ಸಮಿತಿ ಪದಾಧಿಕಾರಿಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಮನವಿಯನ್ನು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಅವರಿಗೆ ಸಲ್ಲಿಸಿ ‘ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ಖಂಡನೀಯ. ಮಹಿಳಾ ಕುರಿಗಾರರ ಮೇಲೆ ನಿರಂತರವಾಗಿ ಇಂಥ ಕೃತ್ಯಗಳು ನಡೆಯುತ್ತಲೇ ಇದ್ದು, ಇದಕ್ಕೆ ಕಡಿವಾಣ ಹಾಕಬೇಕು. ರಾಜ್ಯ ಸರ್ಕಾರ ಕುರುಬರಿಗೆ ಬಂದೂಕು ಪಡೆಯಲು ಅನುಮತಿ ನೀಡಬೇಕು. ಮೃತ ಮಹಿಳೆಯ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಸೇವಾ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ, ನಾಗಭೂಷಣ ಕಾಳೆ, ಬಸವರಾಜ ಮಲಕಾರಿ, ರವಿ ಕಂಬಳೆ, ರೇಣುಕಾ ಹೊಂಗಲ, ಹನುಮಂತಪ್ಪ ದೊಡ್ಡಮನಿ, ಹನುಮಂತಪ್ಪ ಕಂಬಳಿ, ಸಂತೋಷ ಡೊಳ್ಳಿನ, ಹೇಮಂತ ಚಾಗಣ್ಣನವರ, ರಾಜೇಶ್ವರಿ ಸಾಲಗಟ್ಟಿ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
