ಬೆಂಗಳೂರು:
ಈ ಹಿಂದೆ ಶಾಲಾ ಶೈಕ್ಷಣಿಕ ವರ್ಷವು ಮೇ.29ರಿಂದ ಆರಂಭವಾಗಿ ಎಪ್ರಿಲ್ 10ಕ್ಕೆ ಮುಕ್ತಾಯವಾಗುತ್ತಿತ್ತು. ಆದರೆ ಈ ಬಾರಿ ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಬೇಗವೇ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮೇ.16ರಿಂದ 2022-23ರ ಶೈಕ್ಷಣಿಕ ವರ್ಷ ಆರಂಭವಾಗಲಿದೆ.
ಹೀಗಾಗಿ ಈ ಬಾರಿ ಎಪ್ರಿಲ್ 10ರಿಂದ ಮೇ.15ರವರೆಗೆ ಬೇಸಿಗೆ ರಜೆ ನೀಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷ ಮೇ.16ರಿಂದ ಆರಂಭವಾಗಲಿದೆ.
ಕೋವಿಡ್ ಕಾರಣದಿಂದ ನಿರಂತರವಾಗಿ ಭೌತಿಕ ತರಗತಿಗಳು ನಡೆಯದೆ, ಆನ್ ಲೈನ್ ಶಿಕ್ಷಣ ಪರಿಣಾಮಕಾರಿಯಾಗಿಲ್ಲ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ.
ಹೀಗಾಗಿ ಈ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ‘ಕಲಿಕಾ ಚೇತರಿಕಾ ಕಾರ್ಯಕ್ರಮ”ವನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
