ಮೋದಿ ಸರ್ಕಾರದಿಂದ ಪ್ರಮುಖ ನಿರ್ಧಾರ; ಉಕ್ರೇನ್ ಪಕ್ಕದ ರಾಷ್ಟ್ರಗಳಿಗೆ ಹೊರಟ ಕ್ಯಾಬಿನೆಟ್ ಸಚಿವರು

ನವದೆಹಲಿ:

ರಷ್ಯಾ ಮತ್ತು ಉಕ್ರೇನ್​ ಯುದ್ಧ ಹಿನ್ನೆಲೆಯಲ್ಲಿ ಅಲ್ಲಿದ್ದ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ಉಕ್ರೇನ್​​ನಲ್ಲಿರುವ ಭಾರತೀಯರ ಪರಿಸ್ಥಿತಿ ಘೋರವಾಗಿದ್ದು, ಹೀಗಾಗಿ ಅವರನ್ನ ಸ್ವದೇಶಕ್ಕೆ ಕರೆ ತರುವ ಪ್ರಯತ್ನ ನಡೆಯುತ್ತಿದೆ.

ಅದರಂತೆ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.

ಈ ಸಭೆಯಲ್ಲಿ ಕೆಲವು ಕೇಂದ್ರ ಸಚಿವರನ್ನ ಉಕ್ರೇನ್​​ ಅಕ್ಕಪಕ್ಕದ ದೇಶಗಳಿಗೆ ಕಳುಹಿಸಲು ಭಾರತ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

ಕೇಂದ್ರ ಸರ್ಕಾರದ ಉನ್ನತ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಮೋದಿ ಸಂಪುಟದ ಕೆಲವು ಸಚಿವರು ಉಕ್ರೇನ್ ನೆರೆಯ ರಾಷ್ಟ್ರಗಳಿಗೆ ಹೋಗಲಿದ್ದಾರೆ. ಆ ಸಚಿವರು ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರನ್ನ ಸುಲಭವಾಗಿ ಕರೆ ತರಲು ಸಹಾಯ ಮಾಡಲಿದ್ದಾರೆ.

ಜೊತೆಗೆ ವೀಸಾ ಹಾಗೂ ಇತರೆ ರಾಜತಾಂತ್ರಿಕವಾಗಿ ಸಮಸ್ಯೆಗಳನ್ನ ಸ್ಥಳದಲ್ಲೇ ಖುದ್ದು ಪರಿಹರಿಸುವ ಸಲುವಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದೆ ಅಂತಾ ಹೇಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link