11:11ಕ್ಕೆ ‘ಜೇಮ್ಸ್’ ಲಿರಿಕಲ್​ ಸಾಂಗ್​ ​; ‘ಟ್ರೇಡ್​ಮಾರ್ಕ್​..’ ಸಾಂಗ್​ಗಾಗಿ ಕಾದಿದ್ದಾರೆ ಅಭಿಮಾನಿಗಳು

ಬೆಂಗಳೂರು:

ಗಣರಾಜ್ಯೋತ್ಸವ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್​ ಅವರು ಸೈನಿಕನ ಗೆಟಪ್​ನಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ನಂತರ ಟೀಸರ್ ರಿಲೀಸ್ ಮಾಡಿ ಅಭಿಮಾನಿಗಳ ಮನಗೆಲ್ಲಲಾಯಿತು.ಪುನೀತ್​ ರಾಜ್​ಕುಮಾರ್  ಅಭಿಮಾನಿಗಳಿಗೆ ಇಂದು (ಮಾರ್ಚ್​ 1) ವಿಶೇಷ ದಿನ.

ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್​’ನ  ಲಿರಿಕಲ್​ ಸಾಂಗ್​​, ‘ಟ್ರೇಡ್​ಮಾರ್ಕ್​. ಬೆಳಗ್ಗೆ 11:11ಕ್ಕೆ ರಿಲೀಸ್​ ಆಗುತ್ತಿದೆ. ಈ ವಿಚಾರವನ್ನು ಈ ಮೊದಲು ಚಿತ್ರತಂಡ ಘೋಷಣೆ ಮಾಡಿತ್ತು.

ಹೀಗಾಗಿ, ಅಭಿಮಾನಿಗಳು ಈ ಸಾಂಗ್​ ಕೇಳೋಕೆ ಕಾದು ಕೂತಿದ್ದಾರೆ. ಈಗಾಗಲೇಟೀಸರ್​ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗ ಚಿತ್ರದ ಹಾಡು ಹೇಗಿರಲಿದೆ ಎಂಬುದನ್ನು ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಲಿರಿಕಲ್​ ಸಾಂಗ್​ ರಿಲೀಸ್ ಮಾಡುವಾಗ ಅದಕ್ಕೊಂದು ಸಿದ್ಧಸೂತ್ರವಿದೆ. ಸಿನಿಮಾದ ಸ್ಟಿಲ್​ಗಳನ್ನು ಹಾಕಿ, ಬ್ಯಾಕ್​ಗ್ರೌಂಡ್​ನಲ್ಲಿ ಸಾಂಗ್​ ಹಾಕಲಾಗುತ್ತದೆ. ಬಹುತೇಕರು ಹೀಗೆಯೇ ಮಾಡುತ್ತಾರೆ.

ಆದರೆ, ‘ಟ್ರೇಡ್​ಮಾರ್ಕ್​’ ಲಿರಿಕಲ್​ ಸಾಂಗ್​ ಆ ರೀತಿಯಲ್ಲಿ ಇರುವುದಿಲ್ಲ ಎಂಬುದನ್ನು ಇತ್ತೀಚೆಗೆ ಚೇತನ್​ ಕುಮಾರ್ ಹೇಳಿದ್ದರು. ‘ಟ್ರೇಡ್​ಮಾರ್ಕ್​ ಸಾಂಗ್​ಅನ್ನು 5 ಗಾಯಕರು ಹಾಡಿದ್ದಾರೆ. ಫೋಟೋ ಮೇಲೆ ಲಿರಿಕ್ಸ್​ ಹಾಕಿ ರಿಲೀಸ್​ ಮಾಡುವ ಹಾಗೆ ರೆಗ್ಯುಲರ್​ ಆಗಿ ಇದನ್ನು ಬಿಡುಗಡೆ ಮಾಡಲ್ಲ. ತುಂಬ ವಿಶೇಷವಾದ ಕಲಾವಿದರು ಇದರಲ್ಲಿ ಪರ್ಫಾರ್ಮ್​ ಮಾಡಿದ್ದಾರೆ.

ಅದರ ಜೊತೆಗೆ ಮೇಕಿಂಗ್​ ವಿಡಿಯೋ ಕೂಡ ಇರಲಿದೆ. ಮಾ.1ರಂದು ಎಲ್ಲ ಮಾಹಿತಿ ತಿಳಿಯಲಿದೆ. ಇದು ಪವರ್​ಫುಲ್​ ರ‍್ಯಾಪ್​ ಸಾಂಗ್​. ಅಭಿಮಾನಿಗಳಿಗೆ ಇದು ಹೆಚ್ಚು ಇಷ್ಟ ಆಗಲಿದೆ’ ಎಂದಿದ್ದರು. ಈ ಕಾರಣಕ್ಕೂ ಹಾಡಿನ ಬಗ್ಗೆ ನಿರೀಕ್ಷೆ ಹುಟ್ಟಿದೆ.

ಗಣರಾಜ್ಯೋತ್ಸವ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್​ ಅವರು ಸೈನಿಕನ ಗೆಟಪ್​ನಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ನಂತರ ಟೀಸರ್ ರಿಲೀಸ್ ಮಾಡಿ ಅಭಿಮಾನಿಗಳ ಮನಗೆಲ್ಲಲಾಯಿತು.

1 ನಿಮಿಷ 27 ಸೆಕೆಂಡ್​ಗಳ ಟೀಸರ್​ನಲ್ಲಿ ‘ಜೇಮ್ಸ್​​’ ಪಾತ್ರದ ಒಂದು ಸಣ್ಣ ಪರಿಚಯ ನೀಡಲಾಗಿತ್ತು.

ಪಕ್ಕಾ ಆಕ್ಷನ್ ಪ್ಯಾಕ್ ಸಿನಿಮಾ ಇದಾಗಿರಲಿದೆ ಎಂಬುದನ್ನು ಟೀಸರ್ ನೋಡಿದ ಯಾರಾದರೂ ಊಹಿಸಬಹುದು. ಈ ಸಿನಿಮಾದಲ್ಲಿ ಪುನೀತ್​ ಪಾತ್ರಕ್ಕೆ ಶಿವರಾಜ್​ಕುಮಾರ್​ ಕಂಠದಾನ ಮಾಡಿದ್ದು, ಒಂದು ಪವರ್​ಫುಲ್ ಡೈಲಾಗ್ ಕೂಡ ಟೀಸರ್​ನಲ್ಲಿ ಹೈಲೈಟ್​ ಆಗಿದೆ.

‘ಭಾವನೆಗಳು ಬ್ಯುಸಿನೆಸ್​ಗಿಂತ ದೊಡ್ಡದು- ಜೇಮ್ಸ್’ ಎಂಬ ಬರಹವನ್ನು ಟೀಸರ್​ನಲ್ಲಿ ತೋರಿಸಲಾಗಿದೆ. ಇಂದು ಬಿಡುಗಡೆ ಆಗೋ ಸಾಂಗ್​ ಹೇಗಿರಲಿದೆ ಎಂಬುದು ಸದ್ಯದ ಕುತೂಹಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link