ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್

ಬೆಂಗಳೂರು:

ಮಾರ್ಚ್ 4: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಬಜೆಟ್‌ ಮೇಲೆ ಸಾಕಷ್ಟು ನಿರೀಕ್ಷೆ ಇದೆ.

ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ 5 ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ. ಕೃಷಿ, ರೈತರ ಕಲ್ಯಾಣ ಮತ್ತು ನಡೆಯುತ್ತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಹೆಚ್ಚಿನ ಗಮನಹರಿಸುವ ಸಾಧ್ಯತೆ ಇದೆ.

ಜನರ ಮೇಲೆ ತೆರಿಗೆ ಭಾರವನ್ನು ಹಾಕದೇ, ಬಸ್ ಸೇರಿದಂತೆ ಯಾವುದೇ ಸಾರಿಗೆಗಳ ದರ ಏರಿಕೆ ಮಾಡದೇ, ವಿದ್ಯುತ್ ಸೇರಿದಂತೆ ಇತರ ದರಗಳನ್ನು ಏರಿಕೆ ಮಾಡದೇ ಸಂಪನ್ಮೂಲ ಕ್ರೋಢಿಕರಣಕ್ಕೆ ಬಜೆಟ್‌ನಲ್ಲಿ ಹಣಕಾಸು ಸಚಿವರು ಆದ್ಯತೆ ನೀಡಬೇಕಿದೆ.

ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್‌ನಲ್ಲಿ ನೀರಾವರಿ, ಕೃಷಿ, ಲೋಕೋಪಯೋಗಿ, ಸಮಾಜ ಕಲ್ಯಾಣ, ಗ್ರಾಮೀಣಾಭೀವೃದ್ಧಿ ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ. ಅದರಲ್ಲೂ ರಾಜ್ಯದ ನೀರಾವರಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಹೋರಾಟ ಮಾಡುತ್ತಿವೆ. ಆದ್ದರಿಂದ ಈ ವಲಯಕ್ಕೆ ಆದ್ಯತೆ ನೀಡುವ ಅನಿವಾರ್ಯತೆ ಎದುರಾಗಿದೆ.

ಬಸವರಾಜ ಬೊಮ್ಮಾಯಿ ಉತ್ತರ ಕರ್ನಾಟಕ ಭಾಗಕ್ಕೆ ಸೇರಿದ ನಾಯಕರು. ಆದ್ದರಿಂದ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಗಮನಹರಿಸುವ ಸಾಧ್ಯತೆ ಇದೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link