ಶಿವಮೊಗ್ಗ:
ಫೆಬ್ರವರಿ 20 ರಂದು ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದು ಹೇಳಿದರು.
ಮಾರ್ಚ್ 6 ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹರ್ಷ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಹಸ್ತಾಂತರಿಸುವುದಾಗಿ ಈಶ್ವರಪ್ಪ ಹೇಳಿದ್ದಾರೆ.
ಆನ್ ಲೈನ್ ಅಭಿಯಾನದ ಮೂಲಕ ಇದುವರೆಗೆ ಹರ್ಷ ಅವರ ತಾಯಿಯ ಖಾತೆಗೆ 60 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿರುವುದಾಗಿ ತಿಳಿದು ಬಂದಿದೆ.
ಅಚ್ಚರಿ ಮೂಡಿಸಿದೆ
2015 ರಲ್ಲಿ ಹತ್ಯೆಗೀಡಾದ ವಿಶ್ವನಾಥ್ ಶೆಟ್ಟಿ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗಿತ್ತು. ಆತನ 2 ನೇ ಪತ್ನಿ ತಂದೆ, ತಾಯಿಯನ್ನು ಬಿಟ್ಟು ಹೋಗಿದ್ದಾಳೆ. ಈಗ ವಿಶ್ವನಾಥ್ ತಾಯಿ ಮಾತ್ರ ಬದುಕಿದ್ದಾರೆ.
ಅವರಿಗೆ ಸಂಘ ಪರಿವಾರ ಮತ್ತು ಬಿಜೆಪಿ ಆರ್ಥಿಕ ಪರಿಹಾರ ನೀಡಲಿದೆ. ಕಾಂಗ್ರೆಸ್ ಅವರಿಗೆ ಸಾಂತ್ವನ ಹೇಳುತ್ತಿರುವುದು ಅಚ್ಚರಿ ಮೂಡಿಸಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
