ನವದೆಹಲಿ:
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದ್ದರ ಪರಿಣಾಮ ದೇಶದಲ್ಲಿ ಚಿನ್ನದ ದರ ಭಾರಿ ಏರಿಕೆ ಕಂಡಿದೆ.
ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ 1298 ರೂಪಾಯಿ ಏರಿಕೆಯಾಗಿ 53,784 ರೂಪಾಯಿಗೆ ತಲುಪಿದೆ.
ಬೆಳ್ಳಿ ದರ ಕೆಜಿಗೆ 1910 ರೂಪಾಯಿ ಏರಿಕೆಯಾಗಿದ್ದು, 70,977 ರೂಪಾಯಿಗೆ ತಲುಪಿದೆ.
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 76 ಪೈಸೆಯಷ್ಟು ಇಳಿಕೆ ಕಂಡಿದೆ. ಡಾಲರ್ ಗೆ 76.93 ರೂ.ನಂತೆ ವಿನಿಮಯವಾಗಿದೆ. ಒಂದು ಹಂತದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟ 77 ರೂ.ಗೆ ತಲುಪಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ