ಬೆಂಗಳೂರು :
ಕಾಯಂ ಶಿಕ್ಷಕರಿಗೆ ವಿಶೇಷ ಭತ್ಯೆ ನೀಡುವ ಬೇಡಿಕೆಯನ್ನು ತಿರಸ್ಕರಿಸಲಾಗಿದೆ. ಅತಿಥಿ ಶಿಕ್ಷಕರನ್ನು ಕಾಯಂಗೊಳಿಸುವುದಕ್ಕೂ ಅವಕಾಶವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಜೆಡಿಎಸ್ನ ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಎಸ್.ಎಲ್. ಭೋಜೇಗೌಡ, ಬಿಜೆಪಿಯ ಅರುಣ್ ಶಹಾಪುರ, ವೈ.ಎ. ನಾರಾಯಣಸ್ವಾಮಿ, ಶಶಿಲ್ ಜಿ. ನಮೋಶಿ ವಿಧಾನ ಪರಿಷತ್ನಲ್ಲಿ ನಿಯಮ 330ರ ಅಡಿ ಸೋಮವಾರ ನಡೆಸಿದ ಚರ್ಚೆಗೆ ಉತ್ತರಿಸಿದ ಸಚಿವರು ಕಾಯಂ ಶಿಕ್ಷಕರಿಗೆ ವಿಶೇಷ ಭತ್ಯೆ ನೀಡುವ ಬೇಡಿಕೆಯನ್ನು ತಿರಸ್ಕರಿಸಲಾಗಿದೆ. ಅತಿಥಿ ಶಿಕ್ಷಕರನ್ನು ಕಾಯಂಗೊಳಿಸುವುದಕ್ಕೂ ಅವಕಾಶವಿಲ್ಲ. ಆದರೆ, ಅತಿಥಿ ಶಿಕ್ಷಕರು ಮತ್ತು ಹೊರಗುತ್ತಿಗೆ ನೌಕರರ ವೇತನವನ್ನು ಈಗಾಗಲೇ ಹೆಚ್ಚಳ ಮಾಡಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ