ನವದೆಹಲಿ:
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯ ಕರ್ಹಾಲ್‌ನಿಂದ ತಮ್ಮ ಚೊಚ್ಚಲ ರಾಜ್ಯ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿಯ ಎಸ್‌ಪಿ ಸಿಂಗ್ ಬಘೇಲ್ ಅವರನ್ನು 67,000 ಮತಗಳಿಂದ ಸೋಲಿಸಿದ್ದಾರೆ.
ಅಖಿಲೇಶ್ ಯಾದವ್ ಅವರು 1.47 ಲಕ್ಷ ಮತಗಳನ್ನು ಪಡೆದಿದ್ದು, ಬಘೇಲ್ ಅವರ 80,045 ಮತಗಳನ್ನು ಗಳಿಸಿದ್ದಾರೆ.ಅವರು ಕನೌಜ್‌ನಿಂದ ಮೂರು ಬಾರಿ ಲೋಕಸಭಾ ಸಂಸದರಾಗಿದ್ದಾರೆ,ಈಗ ಅವರು ಶಾಸಕರಾಗಿ ಮುಂದುವರೆಯಬೇಕಾದರೆ ಈಗ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ.
ಈ ಬಾರಿ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಸವಾಲು ಹಾಕಲು ಜಯಂತ್ ಚೌಧರಿ ಅವರ ರಾಷ್ಟ್ರೀಯ ಲೋಕದಳ ಮತ್ತು ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ ಸೇರಿದಂತೆ ಪ್ರಾದೇಶಿಕ ಪಕ್ಷಗಳ ‘ಕಾಮನಬಿಲ್ಲು’ ಮೈತ್ರಿಯನ್ನು ಒಟ್ಟುಗೂಡಿಸಿದ್ದ ಅವರು ಬಿಜೆಪಿಗೆ ಸರ್ಕಾರಕ್ಕೆ ಅತಿ ದೊಡ್ಡ ಪ್ರತಿಸ್ಪರ್ಧಿಯಾಗಿ ಪರಿಣಮಿಸಿದ್ದರು.
ಇನ್ನೊಂದೆಡೆಗೆ ಸಿಎಂ ಯೋಗಿ ಆದಿತ್ಯನಾಥ್ ಅವರು ಚೊಚ್ಚಲ ವಿಧಾನಸಭೆ ಚುನಾವಣೆ ಯಲ್ಲಿ ಗೋರಖ್ ಪುರ ನಗರ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಸುಭಾವತಿ ಶುಕ್ಲಾ ಅವರನ್ನು 90,000 ಮತಗಳಿಂದ ಸೋಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ