ಮುಂದಿನ ವರ್ಷದಿಂದ 20 ಸಾವಿರ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಾದ್ಯಂತ 20 ಸಾವಿರ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಅರ್ಲಿ ಎಜುಕೇಶನ್ ಸಿಸ್ಟಮ್- ನರ್ಸರಿಯಿಂದ ಎರಡನೇ ತರಗತಿ) ಶಿಕ್ಷಣ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಜನ ಸಾಮಾನ್ಯರ ಮಕ್ಕಳಿಗೆ ಯಾವುದೇ ಹೊರೆಯಿಲ್ಲದ ಶಿಕ್ಷಣ ನೀಡಬೇಕು ಎಂಬುದು ಉದ್ದೇಶವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡಲು ನಿವೃತ್ತ ಐ.ಎ.ಎಸ್ ಅಧಿಕಾರಿ ಮದನ್ ಗೋಪಾಲ್ ನೇತೃತ್ವದಲ್ಲಿ 26 ಸಮಿತಿಗಳನ್ನು ರಚಿಸಲಾಗಿದೆ. ಅವುಗಳ ಮೂಲಕ ವಿವಿಧ ಕ್ಷೇತ್ರಗಳ ತಜ್ಞರ ಅಭಿಪ್ರಾಯ ಪಡೆಯಲಾಗಿದೆ. ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದ್ದು, ಸದ್ಯದಲ್ಲಿಯೇ ನೇಮಕಾತಿ ನೋಟಿಫಿಕೇಷನ್ ಹೊರಡಿಸಲಾಗುವುದು ಎಂದರು.
ಕೊವಿಡ್ ಕಾರಣಗಳಿಂದ ಶಾಲೆಗಳು ಬಂದ್ ಆಗಿದ್ದರಿಂದ ವಿದ್ಯಾರ್ಥಿಗಳ ಕಲಿಕೆಯ ಮೇರೆ ಪರಿಣಾಮ ಬೀರಿದೆ. ಹೀಗಾಗಿ ಕಲಿಕಾ ಚೇತರಿಕೆಯನ್ನು ಹಮ್ಮಿಕೊಂಡು ಆ ಕೊರತೆಯನ್ನು ನಿಗಿಸಲು ಪ್ರಯತ್ನಿಸಲಾಗುತ್ತದೆ ಎಂದು ಸಚಿವರು ಹೇಳಿದರು.

Recent Articles

spot_img

Related Stories

Share via
Copy link