ವಾಯುಭಾರ ಕುಸಿತ: ಬೆಂಗಳೂರು ಸೇರಿದಂತೆ ಹಲವೆಡೆ ಎರಡು ದಿನ ಭಾರಿ ಮಳೆ

ಬೆಂಗಳೂರು: 

     ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮಾರ್ಚ್ 17, 18 ರಂದು ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತ ಉಂಟಾಗುವುದರಿಂದ ರಾಜ್ಯದ ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

      ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಹವಾಮಾನ ಇಲಾಖೆ, ಬೆಂಗಳೂರು, ಮೈಸೂರು, ಕೊಡಗು ಜಿಲ್ಲೆಗಳ ಕೆಲವೆಡೆ ಮಾರ್ಚ್ 17 ರಂದು ಮಳೆಯಾಗಲಿದೆ. ಮಾರ್ಚ್ 18 ರಂದು ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

https://youtu.be/3yWBst5CBuA

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link