ಬೆಂಗಳೂರು:
ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಅನುಷ್ಠಾನ ಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ.
2022 -23 ನೇ ಸಾಲಿನ ಆರ್ಥಿಕ ವರ್ಷ ಆರಂಭದ ಮೊದಲ ದಿನವಾಗಿರುವ ಏಪ್ರಿಲ್ 1 ರಿಂದಲೇ ಬಜೆಟ್ ಘೋಷಿತ ಯೋಜನೆಗಳ ಜಾರಿಗೆ ಸರ್ಕಾರಿ ಆದೇಶಗಳನ್ನು ಹೊರಡಿಸುವಂತೆ ಸರ್ಕಾರದ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ‘ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯ್ತಿ’ ಪ್ರಶ್ನೆ, ‘ಸಿಎಂ ಬೊಮ್ಮಾಯಿ’ ನೋ ರಿಯಾಕ್ಷನ್
ಈ ಕುರಿತು ಖುದ್ದು ಎಲ್ಲ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿರುವ ಮುಖ್ಯಮಂತ್ರಿಯವರು, ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಉಲ್ಲೇಖಿಸಿ, ಈ ಕುರಿತು ಇಲಾಖೆಯಿಂದ ಯೋಜನೆಯ ರೂಪುರೇಷೆಗಳ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ, ಆರ್ಥಿಕ ಇಲಾಖೆಯ ಆಯವ್ಯಯ ಸಲಹೆಯಂತೆ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.
ಅಲ್ಲದೆ, ಈ ಯೋಜನೆಗಳನ್ನು ಅತಿ ಶೀಘ್ರವಾಗಿ ಜಾರಿಗೊಳಿಸುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ.
‘7ನೇ ವೇತನ ಆಯೋಗ’ ಜಾರಿ ನಿರೀಕ್ಷೆಯಲ್ಲಿದ್ದ ‘ರಾಜ್ಯ ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ