ಬೆಂಗಳೂರು :

ರಾಜ್ಯದಲ್ಲಿ ಹೋಬಳಿಗೊಂದು ಮೂಲ ಸೌಕರ್ಯವಿರುವ ಶಾಲೆಗಳನ್ನು ಮಾದರಿ ಶಾಲೆಗಳಾಗಿ ಉನ್ನತೀಕರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಹೋಬಳಿ ಮಟ್ಟದಲ್ಲಿ ಮೂಲ ಸೌಕರ್ಯವಿರುವ ಶಾಲೆಗಳನ್ನು ಮಾದರಿ ಶಾಲೆಗಳಾಗಿ ಉನ್ನತೀಕರಿಸಲಾಗುವುದು.
ಹಣಕಾಸಿನ ಲಭ್ಯತೆಯ ನಂತರ ಅವುಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲಾಗುವುದು ಎಂದು ಹೇಳಿದ್ದಾರೆ.
2019-20ರಲ್ಲಿ 276 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 2022-23 ನೇ ಸಾಲಿನ ಅಯವ್ಯಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಮಟ್ಟವನ್ನು ಉತ್ತಮಪಡಿಸಲು ಮಾದರಿ ಶಾಲೆಗಳನ್ನಾಗಿ ಉನ್ನತೀಕರಿಸಲು ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








