ಅಸನಿ ಚಂಡಮಾರುತ; ರಾಜ್ಯದಲ್ಲಿಯೂ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: 

ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸಲಿದ್ದು, ಮಾರ್ಚ್ 21ರಂದು ಅಸನಿ ಎಂಬ ಈ ವರ್ಷದ ಮೊದಲ ಚಂಡಮಾರುತ ಬೀಸಲಿದೆ. ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಸನಿ ಚಂಡಮಾರುತ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳ ಉದ್ದಕ್ಕೂ ಬೀಸಲಿದ್ದು, ಗಂಟೆಗೆ 70-90 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾವಣೆಯಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

IPS ಅಧಿಕಾರಿ ಸೂಟ್ ಕೇಸ್ ಪರಿಶೀಲಿಸಿದ ಏರ್ ಪೋರ್ಟ್ ಸಿಬ್ಬಂದಿಗೆ ಶಾಕ್..! ಯಾಕೆ ಗೊತ್ತಾ..?

ಮಾರ್ಚ್ 20 ಹಾಗೂ 21ರಂದು ಕರಾವಳಿ ಭಾಗದ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇಂದು ಹಾಗೂ ನಾಳೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link