ದಾವಣಗೆರೆ :

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಾನೇ ಮುಖ್ಯಮಂತ್ರಿ. ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸೋಕೆ ನನ್ನ ಬಳಿ ಹಣ ಇಲ್ವಾ?, ನನ್ನ ಬಳಿ ಶಕ್ತಿ ಇಲ್ವಾ..? ಮುಂದೆ ಪಕ್ಷ ಅಧಿಕಾರಕ್ಕೆ ಬಂದ್ರೆ ನಾನು ಮುಖ್ಯಮಂತ್ರಿ ಆಕಾಂಕ್ಷಿ ಎಂದು ಮಾಜಿ ಸಚಿವ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಜೊತೆ ನಂದೂ ಸ್ಪರ್ಧೆ ಇದೆ. ದಾವಣಗೆರೆ ಉತ್ತರದಿಂದ ಸ್ಪರ್ಧೆ ಮಾಡೋ ಬಗ್ಗೆ ಸಿಎಂ ಬೊಮ್ಮಾಯಿ ನನ್ನ ಜೊತೆ ಮಾತನಾಡಿಲ್ಲ. ಅವರು ವಿರೋಧ ಪಕ್ಷದವರು ನನ್ನ ಜೊತೆ ಯಾಕೆ ಮಾತಾಡ್ತಾರೆ. ಮುಂದಿನ ತಿಂಗಳು ಏಪ್ರೀಲ್ 16ಕ್ಕೆ ಮೊಮ್ಮಗಳ ಮದುವೆಗೆ ಸಿಎಂ ಬರುತ್ತಾರೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








