ಕೆಲಸ ಮುಗಿಸಿ ಮಧ್ಯರಾತ್ರಿ 10 ಕಿ.ಮೀ ಓಡಿ ಮನೆ ಸೇರುವ ಯುವಕನಿಗೆ ಸೇನಾಧಿಕಾರಿ​​ ನೀಡಿದ್ರು ಬಂಪರ್ ಆಫರ್!

ಹೈದರಾಬಾದ್​: ಕೆಲಸ ಮುಗಿಸಿ ಮಧ್ಯರಾತ್ರಿ 10 ಕಿ.ಮೀ ಓಡಿಯೇ ಮನೆ ಸೇರುವ ಯುವಕನಿಗೆ ಸೇನಾಧಿಕಾರಿ​​ ನೀಡಿದ್ರು ಬಂಪರ್ ಆಫರ್!

ಕೆಲಸ ಮುಗಿಸಿದ ಬಳಿಕ 10 ಕಿಲೋ ಮೀಟರ್ ಓಡುತ್ತಲೇ ಮನೆ ಸೇರುತ್ತಿದ್ದ ಯುವಕನಿಗೆ ನಿವೃತ್ತ ಲೆಫ್ಟಿನೆಂಟ್​ ಜನರಲ್​ವೋರ್ವರು ಸಹಾಯ ಮಾಡಲು ಮುಂದಾಗಿದ್ದಾರೆ.

ಮೆಕ್​ಡೊನಾಲ್ಡ್ ಕಂಪನಿಯಲ್ಲಿ ಕೆಲಸ ಮಾಡುವ 19 ವರ್ಷದ ಯುವಕ ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋ ಮೀಟರ್​ ಓಡುತ್ತಲೇ ಮನೆ ಸೇರುವ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್​ ಆಗಿತ್ತು.ಇದೀಗ ಈತನಿಗೆ ಅದೃಷ್ಟ ಒಲಿದು ಬಂದಿದೆ.

ಪಿಯುಸಿ ನಂತ್ರ ತೆಗೆದಿದ್ದು ಜೆರಾಕ್ಸ್ ಅಂಗಡಿ​: ಬ್ರೋಕರ್​ ಆದ ಬಳಿಕ ಮಾಜಿ ಮಂತ್ರಿಯ ಲಕ್ಷುರಿ ಬಂಗಲೆ

ಭಾರತೀಯ ಸೇನೆ ಸೇರುವ ಉದ್ದೇಶದಿಂದ ಈ ಯುವಕ ಪ್ರತಿದಿನ ಹತ್ತು ಕಿ.ಮೀ ಓಡುತ್ತಲೇ ತನ್ನ ಮನೆ ಸೇರಿಕೊಳ್ಳುತ್ತಿದ್ದ. ಈತನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ನಿವೃತ್ತ ಜನರಲ್​​ ಸತೀಸ್​ ದುವಾ ಎಂಬುವವರು ಟ್ವೀಟ್ ಮಾಡಿದ್ದು, ಪ್ರದೀಪ್ ಮೆಹ್ರಾಗೆ ಭಾರತೀಯ ಸೇನೆ ಸೇರಲು ಸಕಲ ರೀತಿಯ ತರಬೇತಿ ನೀಡಲು ಸಿದ್ಧರಾಗಿರುವುದಾಗಿ ಪ್ರಕಟಿಸಿದ್ದಾರೆ.

‘ಭಾರತೀಯ ಸೇನೆ ಸೇರಲು ದೈಹಿಕವಾಗಿ ಸದೃಢರಾಗಿರಬೇಕು. ಬೆಳಗ್ಗೆ ವ್ಯಾಯಾಮ, ಜಾಗಿಂಗ್, ಜಿಮ್​ಗೆ ಹೋಗಲು ನನ್ನ ಬಳಿ ಸಮಯವಿಲ್ಲ. ಹಾಗಾಗಿ, ಮಧ್ಯರಾತ್ರಿವರೆಗೂ ಕೆಲಸ ಮಾಡುತ್ತೇನೆ. ನಂತರ ಮನೆಗೆ ಓಡುತ್ತಲೇ ಹಿಂತಿರುಗುತ್ತೇನೆ. ಸಿಗುವ ವೇತನದಲ್ಲೇ ತಾಯಿಯ ಆರೋಗ್ಯ ನೋಡಿಕೊಳ್ಳಬೇಕು, ಮನೆ ಖರ್ಚು ನಿಭಾಯಿಸಬೇಕು.

‘ಆಟೋಮೊಬೈಲ್ ಅಂಗಡಿ’ ಇಟ್ಟವರ ಮನೆ, ಈಗ ‘ಗೋಲ್ಡ್ ಪ್ಯಾಲೆಸ್’: ‘ACB ದಾಳಿ’ಯಲ್ಲಿ ಸ್ಪೋಟಕ ರಹಸ್ಯ ಬಯಲು

ಜೊತೆಗೆ ನನ್ನ ದೇಹವನ್ನು ಫಿಟ್​ ಆಗಿ ಇಟ್ಟುಕೊಳ್ಳಬೇಕೆಂದು ಪ್ರತಿ ರಾತ್ರಿ ನಗರದ ರಸ್ತೆಗಳಲ್ಲಿ 10 ಕಿ.ಮೀ ಓಡುವ ಮೂಲಕ ಆರ್ಮಿ ಸೇರಿಕೊಳ್ಳಲು ತಯಾರಿ ನಡೆಸುತ್ತಿದ್ದೇನೆ’ ಎಂದು ಯುವಕ ಹೇಳಿಕೊಂಡಿದ್ದ. ಈ ವಿಡಿಯೋ ತುಣುಕನ್ನು ಚಿತ್ರ ನಿರ್ಮಾಪಕ ವಿನೋದ್ ಕಪ್ರಿ ಟ್ವೀಟ್ ಮಾಡಿದ್ದರು.

ಇದನ್ನು ಗಮನಿಸಿದ ಲೆಫ್ಟಿನೆಂಟ್​ ಜನರಲ್​ ಸತೀಶ್ ದುವಾ, ಭಾರತೀಯ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಎಲ್ಲ ರೀತಿಯಿಂದಲೂ ತಾವು ಸಹಾಯ ಮಾಡುವುದಾಗಿ ಪ್ರಕಟಿಸಿದ್ದಾರೆ. ಸೇನಾ ಕಮಾಂಡರ್​​ ಲೆಫ್ಟಿನೆಂಟ್ ಜನರಲ್​ ರಾಣಾ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ತಮ್ಮ ರೆಜಿಮೆಂಟ್​​ನಲ್ಲಿ ನೇಮಕಾತಿ ಮಾಡಿಕೊಳ್ಳಲು ತರಬೇತಿ ನೀಡುವುದಾಗಿ ತಿಳಿಸಿದ್ದಾಗಿ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮೂಲತಃ ಉತ್ತರಾಖಂಡ ನಿವಾಸಿ ಪ್ರದೀಪ್ ಮೆಹ್ರಾ (19) ನೋಯ್ಡಾದಲ್ಲಿ ಮೆಕ್‌ಡೊನಾಲ್ಡ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದಾನೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link