ಹಾವೇರಿ:
ಹಾವೇರಿ ಮಾರ್ಚ್ 24, 2022: ಉಕ್ರೇನ್ ಮಿಸೈಲ್ ದಾಳಿ ವೇಳೆ ಮೃತಪಟ್ಟ ಕರ್ನಾಟಕದ ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್ ನಿವಾಸಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಭೇಟಿ ನೀಡಿದರು.
ನವೀನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರೊಂದಿಗೆ ಕೆಲವು ನಿಮಿಷಗಳ ಕಾಲ ಸಾಂತ್ವಾನ ಹೇಳಿದರು.ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ, ಹಾವೇರಿ ಜಿಲ್ಲಾಧಿಕಾರಿ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ