ಬೆಂಗಳೂರು :
ಪ್ರಸಕ್ತ ಸಾಲಿನ ಎಸ್ಎಸ್ ಎಲ್ ಸಿ (SSLC) ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ಬಂದರೆ ಪರೀಕ್ಷೆಗೆ ಅವಕಾಶ ಸಿಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್, ಈ ಬಾರಿ ಒಟ್ಟು8,73,846 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಹೈಕೋರ್ಟ್ ಆದೇಶ ಪಾಲಿಸದೆ ಯಾವುದೇ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.
ಇಂದಿನಿಂದ 15 ನೇ ಆವೃತ್ತಿ `ಐಪಿಎಲ್’ ಹಬ್ಬ ಆರಂಭ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
ಕೋವಿಡ್ ನಿಯಂತ್ರಣದಲ್ಲಿರುವುದರಿಂದ ಈ ಬಾರಿ ಪರೀಕ್ಷೆಗೆ ಕೆಲ ಮಾರ್ಗ ಸೂಚಿಗಳನ್ನು ಸಡಿಲಗೊಳಿಸಲಾಗಿದೆ. ಮಾಸ್ಕ್ ಕಡ್ಡಾಯವಿರುವುದಿಲ್ಲ. ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರದ ಸಿಬ್ಬಂದಿ ಪರೀಕ್ಷೆಯ ಸಮಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಆದರೆ ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು. ಪ್ರತಿದಿನ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸೂಚಿಸಿದ್ದೇವೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/03/Capture-277.gif)