ಮೈಸೂರಿನಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾಧ್ಯಮ ಹೇಳಿಕೆ

ಮೈಸೂರು:

ಸ್ವಾಮೀಜಿಯವರ ಬಗ್ಗೆ ನನಗೆ ವೈಯಕ್ತಿಕವಾಗಿ ಅಪಾರ ಗೌರವವಿದೆ. ಅವರಿಗೆ ಅಗೌರವ ತೋರುವಂತೆ ಈ ಹಿಂದೆಯೂ ಮಾತನಾಡಿಲ್ಲ, ಮುಂದೆಯೂ ಮಾತನಾಡಲ್ಲ. ಹಿಜಾಬ್ ಬಗ್ಗೆ ನಿನ್ನೆ ನಾನು ಪ್ರಸ್ತಾಪವನ್ನೇ ಮಾಡಿಲ್ಲ. ಹೀಗಿದ್ದಾಗ ಹಿಜಾಬ್ ಗೂ ಮತ್ತು ಸ್ವಾಮೀಜಿಗಳ ಬಟ್ಟೆಗೂ ಹೋಲಿಕೆ ಮಾಡಲಾಗಿದೆ ಎಂಬಂಶ ಎಲ್ಲಿಂದ ಬರುತ್ತೆ? ಹೆಣ್ಣು ಮಕ್ಕಳು ಧರಿಸುವ ದುಪ್ಪಟ್ಟಾ ಬಗ್ಗೆ ಮಾತನಾಡಿದ್ದೆ, ಹಿಜಾಬ್ ಗೂ ದುಪ್ಪಾಟ್ಟಾಗೂ ಭಾರಿ ವ್ಯತ್ಯಾಸವಿದೆ.

ಮಾ. 28ರವರೆಗೆ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿ ಹಲವೆಡೆ ಮಳೆ; ಹವಮಾನ ಇಲಾಖೆ ಮುನ್ಸೂಚನೆ

ನಾನು ಸದನದಲ್ಲಿ ಮಾತನಾಡುವಾಗ ತರಗತಿ ಒಳಗೆ ಹಿಜಾಬ್ ಧರಿಸದಂತೆ ನ್ಯಾಯಾಲಯದ ಆದೇಶ ಇದೆ, ಹಾಗಾಗಿ ಸರ್ಕಾರ ಶಾಲಾ ಸಮವಸ್ತ್ರದ ಬಣ್ಣದ ದುಪ್ಪಟ್ಟಾ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಸಚಿವರಾದ ಅಶ್ವತ್ಥ ನಾರಾಯಣ ಮತ್ತು ನಾಗೇಶ್ ಅವರಿಗೆ ಸಲಹೆ ನೀಡಿದ್ದೆ. ಇದನ್ನು ಸ್ವೀಕರಿಸೋದು ಬಿಡೋದು ಸರ್ಕಾರಕ್ಕೆ ಬಿಟ್ಟ ವಿಚಾರ. ವಿದ್ಯಾರ್ಥಿಗಳ ಭವಿಷ್ಯ ಹಾಳಾಗಬಾರದು ಎಂಬ ಕಾರಣಕ್ಕೆ ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ.

ವಿಕಲಚೇತನರ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ನಾವು ಸಮವಸ್ತ್ರಕ್ಕೆ ವಿರುದ್ಧವಾಗಿಲ್ಲ, ಸಮವಸ್ತ್ರವನ್ನು ಧರಿಸಲಿ, ಅದರ ಜೊತೆಗೆ ಸಮವಸ್ತ್ರದ ಬಣ್ಣದ ದುಪ್ಪಟ್ಟವನ್ನು ಧರಿಸಲು ಅವಕಾಶ ನೀಡಬೇಕು ಎಂದು ಹೇಳಿದ್ದೆ. ಮಕ್ಕಳಿಗೆ ಶಿಕ್ಷಣ ನೀಡಬೇಕಿರುವುದು ಸರ್ಕಾರದ ಜವಾಬ್ದಾರಿ, ಒಂದು ವೇಳೆ ಪರೀಕ್ಷೆಗೆ ಹಾಜರಾಗದೆ ವಿದ್ಯಾರ್ಥಿಗಳ ಭವಿಷ್ಯ ಹಾಳಾದರೆ ಅದಕ್ಕೂ ಸರ್ಕಾರವೇ ಜವಾಬ್ದಾರಿಯಾಗುತ್ತದೆ. ಸಲಹೆ ನೀಡುವುದು ವಿರೋಧ ಪಕ್ಷವಾದ ನಮ್ಮ ಕರ್ತವ್ಯ. ಅದನ್ನು ಸ್ವೀಕರಿಸದಿದ್ದರೆ ನಾವೇನು ಮಾಡೋದು?

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link