ಆರ್‌ಸಿಬಿ vs ಪಂಜಾಬ್ ಕಿಂಗ್ಸ್ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

ವಿಶ್ವದ ಶ್ರೀಮಂತ ಹಾಗೂ ಜನಪ್ರಿಯ ಫ್ರಾಂಚೈಸಿ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಮರಳಿ ಬಂದಿದ್ದು ಹದಿನೈದನೇ ಆವೃತ್ತಿ ಇಂದಿನಿಂದ ( ಮಾರ್ಚ್ 26 ) ಆರಂಭಗೊಳ್ಳುತ್ತಿದೆ. ಟೂರ್ನಿಯ ಪ್ರಥಮ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಳೆದ ಬಾರಿಯ ಐಪಿಎಲ್ ಟೂರ್ನಿಯ ರನ್ನರ್ ಅಪ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಲಿವೆ.

ಐಪಿಎಲ್ 2022: 37 ಎಸೆತಗಳಿಗೆ ಅಜೇಯ 70 ರನ್; ರಾಜಸ್ಥಾನ್ ಪರ ಅಬ್ಬರಿಸಿದ ಹೆಟ್ಮೆಯರ್, ಪಡಿಕ್ಕಲ್!

ಇನ್ನು ಟೂರ್ನಿಯ ಮೊದಲನೇ ದಿನದಂದು ಕೇವಲ ಒಂದು ಪಂದ್ಯ ಮಾತ್ರ ನಡೆದರೆ ಎರಡನೇ ದಿನದಂದು ( ಮಾರ್ಚ್ 27 ) ಎರಡು ಪಂದ್ಯಗಳು ನಡೆಯಲಿವೆ. ಇನ್ನು ಎರಡನೇ ದಿನ ನಡೆಯಲಿರುವ ಪ್ರಥಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಟ ನಡೆಸಿದರೆ, ಸಂಜೆ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸಲಿವೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇತ್ತಂಡಗಳೂ ನೂತನ ನಾಯಕರ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿವೆ.

IPL 2022: ವಾಂಖೆಡೆ ಪಿಚ್ ಯಾರಿಗೆ ಹೆಚ್ಚು ಸಹಕಾರಿ?: ಟಾಸ್ ಗೆದ್ದ ತಂಡ ಏನನ್ನು ಆಯ್ಕೆ ಮಾಡಿಕೊಳ್ಳಬೇಕು?

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದರೆ, ಪಂಜಾಬ್ ಕಿಂಗ್ಸ್ ನೂತನ ನಾಯಕ ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಹೀಗೆ ಈ ಪಂದ್ಯದ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎರಡೂ ತಂಡಗಳ ಅಭಿಮಾನಿಗಳೂ ನಮಗೆ ಅಸಲಿ ಐಪಿಎಲ್ ಶುರುವಾಗುವುದೇ ಈ ಪಂದ್ಯದ ಮೂಲಕ ಎಂಬ ಮಾತುಗಳನ್ನಾಡುತ್ತಿದ್ದಾರೆ.

 ಕಾರವಾಳಿ ಜಿಲ್ಲೆಯಲ್ಲಿ ಮುಂದುವರೆಗೆ ಧರ್ಮ ದಾಂಗಲ್: ಜಾತ್ರೆ ಬಳಿಕ, ತಡರಾತ್ರಿ ಮುಸ್ಲೀಂ ಹೋಟೆಲ್ ಗಳ ವಿರುದ್ಧ ಸಮರ

ಹೀಗೆ ಪಂದ್ಯದ ಕುರಿತ ಚರ್ಚೆಗಳು ಹೆಚ್ಚಾಗುತ್ತಿದ್ದು, ಎರಡು ತಂಡಗಳ ಮುಖಾಮುಖಿ ಪಂದ್ಯಗಳ ಪೈಕಿ ಹೆಚ್ಚು ಪಂದ್ಯ ಗೆದ್ದು ಮೇಲುಗೈ ಸಾಧಿಸಿರುವ ತಂಡ ಯಾವುದು ಎಂಬ ಚರ್ಚೆಯೂ ನಡೆಯುತ್ತಿದೆ. ಹಾಗಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಇದುವರೆಗೂ ಒಟ್ಟು ಎಷ್ಟು ಪಂದ್ಯಗಳು ನಡೆದಿವೆ ಹಾಗೂ ಈ ಪಂದ್ಯಗಳ ಪೈಕಿ ಹೆಚ್ಚು ಪಂದ್ಯಗಳನ್ನು ಗೆದ್ದು ಮೇಲುಗೈ ಸಾಧಿಸಿರುವ ತಂಡ ಯಾವುದು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಮುಖಾಮುಖಿ ಪಂದ್ಯಗಳು

 ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಇದುವರೆಗೂ ಐಪಿಎಲ್ ಇತಿಹಾಸದಲ್ಲಿ ಒಟ್ಟು 28 ಪಂದ್ಯಗಳು ನಡೆದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಮುಖಾಮುಖಿ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಮೇಲುಗೈ ಸಾಧಿಸಿದೆ.https://prajapragathi.com/drive-to-the-disabled-basketball-tournament/

ಅಧಿಕ ರನ್ ಹಾಗೂ ಕಡಿಮೆ ರನ್

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿರುವ ಪಂದ್ಯಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗಳಿಸಿರುವ ಗರಿಷ್ಟ ಮೊತ್ತ 226 ರನ್ ಹಾಗೂ ಪಂಜಾಬ್ ಕಿಂಗ್ಸ್ ಗಳಿಸಿರುವ ಗರಿಷ್ಟ ಮೊತ್ತ 232 ರನ್. ಹಾಗೂ ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಲೆಹಾಕಿರುವ ಕನಿಷ್ಠ ಮೊತ್ತ 84 ರನ್ ಹಾಗೂ ಪಂಜಾಬ್ ಕಿಂಗ್ಸ್ ಕಲೆಹಾಕಿರು ಕನಿಷ್ಠ ಮೊತ್ತ 88 ರನ್.

ಕಳೆದ ವರ್ಷದ ಮುಖಾಮುಖಿ

2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಒಟ್ಟು ಎರಡು ಪಂದ್ಯಗಳು ನಡೆದಿದ್ದು, ಪ್ರಥಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 34 ರನ್‌ಗಳ ಜಯ ಸಾಧಿಸಿತ್ತು ಹಾಗೂ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್‌ಗಳ ಜಯ ಕಂಡಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link