ರಾಹುಲ್‍ ಗಾಂಧಿ ರಾಜ್ಯ ಭೇಟಿ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು:

ಬೆಂಗಳೂರು,ಮಾ.31-ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಪಕ್ಷದ ಕಾರ್ಯಕರ್ತರು, ನಾಯಕರು ಹಾಗೂ ಮುಂಚುಣಿ ಘಟಕದ ಪ್ರಮುಖರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ಬೆಳಗ್ಗೆಯೇ ರಾಹುಲ್‍ಗಾಂಧಿ ಬೆಂಗಳೂರಿಗೆ ಆಗಮಿಸಿ ದೇವನಹಳ್ಳಿ ಬಳಿಯ ಹೋಟೆಲ್ ಒಂದರಲ್ಲಿ ಶಾಸಕರು, ಮಾಜಿ ಮೇಯರ್‍ಗಳ ಜತೆ ಸಮಾಲೋಚನೆ ನಡೆಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ರಾಹುಲ್‍ಗಾಂಧಿ ದೆಹಲಿಯಿಂದ ಹೊರಡುವುದೇ ತಡವಾದ್ದರಿಂದ ನಿಗದಿತ ಕಾರ್ಯಕ್ರಮ ನಾಳೆಗೆ ಮುಂದೂಡಲಾಗಿದೆ.

ಇಂದು ಮಧ್ಯಾಹ್ನ ರಾಜ್ಯಕ್ಕೆ ಆಗಮಿಸುವ ರಾಹುಲ್‍ಗಾಂಧಿ ಅವರು ಸಂಜೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆಗೆ ತೆರಳಿ ಆಶೀರ್ವಾದ ಪಡೆಯಲಿದ್ದಾರೆ. ನಾಳೆ ಬೆಳಗ್ಗೆ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್‍ನ ನೂತನ ಕಚೇರಿ ಸಭಾಂಗಣದಲ್ಲಿ ಪಕ್ಷದ ಕಾರ್ಯಕರ್ತರು, ನಾಯಕರು, ಮುಂಚೂಣಿ ಘಟಕದ ಪ್ರಮುಖರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ತುಮಕೂರು: ರಾಷ್ಟ್ರೀಯ ಹೆದ್ದಾರಿಗೆ ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ- ಪೂರ್ಣ ಮಾಹಿತಿ ಇಲ್ಲಿದೆ

ಈ ವೇಳೆ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ. ಬಿಬಿಎಂಪಿ ಚುನಾವಣೆ ತಯಾರಿ, ವಿಧಾನಸಭೆ ಚುನಾವಣೆಯ ಪೂರ್ವ ಸಿದ್ಧತೆ ಸೇರಿದಂತೆ ಹಲವಾರು ವಿಚಾರಗಳ ಕುರಿತು ಸಮಾಲೋಚನೆ ನಡೆಯಲಿದೆ. ಕೆಲವು ವಿಷಯಗಳ ಕುರಿತು ವಿಡಿಯೋ ಕಾನರೆನ್ಸ್ ಸಭೆಗಳನ್ನೂ ನಡೆಸಲಿದ್ದಾರೆ.

ಕೋವಿಡ್ ಬಳಿಕ ಸುಮಾರು ಮೂರು ವರ್ಷಗಳ ನಂತರ ರಾಹುಲ್‍ಗಾಂ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಪಕ್ಷದಲ್ಲಿ ಹೊಸ ಉತ್ಸಾಹ ಮೂಡಿಸುತ್ತಿದೆ. ಸಂಘಟನಾತ್ಮಕ ದೃಷ್ಟಿಯಿಂದ ಹಾಗೂ ಪಕ್ಷದ ನಾಯಕರ ನಡುವಿನ ಸಮನ್ವಯತೆ ದೃಷ್ಟಿಯಿಂದ ರಾಹುಲ್‍ಗಾಂ ಅವರ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

                ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link