ಶ್ರೀಶೈಲದಲ್ಲಿ ಬಾಗಲಕೋಟೆ ಮೂಲದ ಯುವಕನ ಮೇಲೆ ಹಲ್ಲೆ; ಆತಂಕದಲ್ಲಿ ಕುಟುಂಬಸ್ಥರು- ಸಿಎಂ ಬೊಮ್ಮಾಯಿ ಹೇಳಿದ್ದೇನು?

 ಶ್ರೀಶೈಲದ ಹೊಟೆಲ್​ನಲ್ಲಿ ನೀರು ಕೇಳುವ ವಿಚಾರದಲ್ಲಿ ಪ್ರಾರಂಭವಾದ ಜಗಳದಲ್ಲಿ ಬಾಗಲಕೋಟೆ ಮೂಲದ ಯುವಕನಿಗೆ ಚಾಕು ಇರಿತವಾಗಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವಕನ ಆರೋಗ್ಯದ ಬಗ್ಗೆ ಪೊಲೀಸರು ಹೇಳಿದ್ದೇನು?
ಇಲ್ಲಿದೆ ಮಾಹಿತಿ.

ಆಂಧ್ರ ಪ್ರದೇಶದ ಶ್ರೀಶೈಲಂನಲ್ಲಿ  ಯುಗಾದಿ ಹಬ್ಬಕ್ಕೆ ದೇವರ ದರ್ಶನಕ್ಕೆ ತೆರಳಿದ್ದ ಕರ್ನಾಟಕದ ಭಕ್ತರೊಂದಿಗೆ ಅಲ್ಲಿನ ಸ್ಥಳೀಯ ವ್ಯಾಪಾರಿಗಳು ನಡೆಸಿದ ಜಗಳದಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೊಟೆಲ್​ನಲ್ಲಿ ನೀರು ಕೇಳುವ ವಿಚಾರದಲ್ಲಿ ಪ್ರಾರಂಭವಾದ ಜಗಳದಲ್ಲಿ ಬಾಗಲಕೋಟೆ ಮೂಲದ ಯುವಕನಿಗೆ ಚಾಕು ಇರಿತವಾಗಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀಶೈಲ್ ವಾರಿಮಠ (28) ಚಾಕು ಇರಿತಕ್ಕೆ ಒಳಗಾದ ಯುವಕನಾಗಿದ್ದು, ಅವರ ಮನೆಯಲ್ಲಿ ಕುಟುಂಬಸ್ಥರು ಆತಂಕಕ್ಕೀಡಾಗಿದ್ದಾರೆ.

ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ : ಗೋವಿಂದ ಎಂ.ಕಾರಜೋಳ

ತಾಯಿ ಭಾರತಿ ಹಾಗೂ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದು, ಶ್ರೀಶೈಲ್ ಆರೋಗ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಜಾನಮಟ್ಟಿ ಗ್ರಾಮದ ಶ್ರೀಶೈಲ್ ಶನಿವಾರ ಗ್ರಾಮದಿಂದ ಶ್ರೀಶೈಲಕ್ಕೆ ತೆರಳಿದ್ದರು. ರೇಲ್ವೆ ಮೂಲಕ ಹೋಗಿದ್ದ ಅವರು ನಂತರ ಕುಟುಂಬವನ್ನು ಸಂಪರ್ಕಿಸಿದ್ದರು.

”ಪೂಜೆ ,ಅಭಿಷೇಕ ಮಾಡಿಸಿದ್ದೇನೆ. ಇಂದು ಗ್ರಾಮಕ್ಕೆ ಮರಳುವುದಾಗಿ ಅವರು ಹೇಳಿದ್ದರು. ಕಳೆದ ಹದಿನೈದು ವರ್ಷಗಳಿಂದ ಶ್ರೀಶೈಲಕ್ಕೆ ಅವರು ಯಾತ್ರೆ ಕೈಗೊಳ್ಳುತ್ತಿದ್ದರು. ಶ್ರೀಶೈಲ್ ಆರೋಗ್ಯದ ಬಗ್ಗೆ ಗೊಂದಲ ಮೂಡಿದ್ದು, ವದಂತಿಗಳು ಹರಿದಾಡಿವೆ. ಈ ಬಗ್ಗೆ ಕರ್ನೂಲ್ ಎಸ್​ಪಿ ಮಾಹಿತಿ ನೀಡಿ ಶ್ರೀಶೈಲ್ ಬದುಕಿರುವುದಾಗಿ ತಿಳಿಸಿದ್ದಾರೆ. ಶ್ರೀಶೈಲ್ ಸಹೋದರ ಶಿವು ಸದ್ಯ ಆಸ್ಪತ್ರೆಗೆ ತೆರಳಿದ್ದಾರೆ.

‘ಬಂಗಾರದ ಮನುಷ್ಯ’ ಚಿತ್ರಕ್ಕೆ 50 ವರ್ಷ; ಅಣ್ಣಾವ್ರು ನಟಿಸಿದ ಈ ಸಿನಿಮಾ ಮಾಡಿದ ದಾಖಲೆಗಳು ಒಂದೆರಡಲ್ಲ

ಘಟನೆ ಬಗ್ಗೆ ಬೀಳಗಿ ಠಾಣೆ ಪೊಲೀಸರು ಹಾಗೂ ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬಾಗಲಕೋಟೆ ಎಸ್​ಪಿ ಲೋಕೇಶ್ ಜಗಲಾಸರ್ ಮಾಹಿತಿ ನೀಡಿ, ಶ್ರೀಶೈಲ್ ವಾರಿಮಠ ಕೊಲೆ ಎಂಬುದು ಸದ್ಯಕ್ಕೆ ವದಂತಿ. ಯಾವುದೇ ಸಾವು ಆಗಿಲ್ಲ ಎಂದು ಕರ್ನೂಲ್ ಎಸ್ ಪಿ ಮಾಹಿತಿ ನೀಡಿದ್ದಾರೆ. ವದಂತಿ, ತಪ್ಪು ಸಂದೇಶ ಹೋಗಬಾರದು ಎಂದು ನುಡಿದಿದ್ದಾರೆ.

ಕರ್ನಾಟಕ ಮೂಲದ ಭಕ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಆರೋಪದ ಹಿನ್ನೆಲೆಯಲ್ಲಿ ಉಂಟಾದ ಘರ್ಷಣೆಯಲ್ಲಿ ಅಪಾರ ಹಾನಿಯಾಗಿದೆ. ಹಲವು ವಾಹನಗಳು ಜಖಂಗೊಂಡಿವೆ. ಗಲಾಟೆ ಹಿನ್ನೆಲೆಯಲ್ಲಿ ಸದ್ಯ ಶ್ರೀಶೈಲದಲ್ಲಿ ಅಂಗಡಿ-ಮುಂಗಟ್ಟುಗಳು ಬಂದ್ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ರಾಹುಲ್‍ ಗಾಂಧಿ ರಾಜ್ಯ ಭೇಟಿ ಕಾರ್ಯಕ್ರಮ ಮುಂದೂಡಿಕೆ

ಘಟನೆಯ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ:

ಶ್ರೀಶೈಲದಲ್ಲಿ ಬಾಗಲಕೋಟೆಯ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀಶೈಲದಲ್ಲಿ ಸ್ಥಳೀಯರು ಮತ್ತು ಭಕ್ತರ ನಡುವೆ ಗಲಾಟೆ ನಡೆದಿದೆ. ನಾನು ಆಂಧ್ರಪ್ರದೇಶದ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಇಬ್ಬರಿಗೆ ತೀವ್ರವಾದ ಗಾಯವಾಗಿದೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸಿಎಂ ತಿಳಿಸಿದ್ದಾರೆ.

ತುಮಕೂರು: ರಾಷ್ಟ್ರೀಯ ಹೆದ್ದಾರಿಗೆ ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ- ಪೂರ್ಣ ಮಾಹಿತಿ ಇಲ್ಲಿದೆ

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link