ತುಮಕೂರು:
ಡಾ.ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ
ನಡೆನಾಡಿದ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯೋತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿಯಾಗುತ್ತಿದ್ದಾರೆ.
ಇತ್ತ ಇನ್ನೊಂದೆಡೆ ಗದ್ದುಗೆಗೆ ವಿಶೇಷ ಪೂಜೆ, ಅಭಿಷೇಕ, ನೆರವೇರಿಸಲಾಗುತ್ತಿದೆ. ಬೆಳಿಗ್ಗೆ ಐದು ಗಂಟೆಯಿಂದಲೇ ವಿವಿಧ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಅಭಿಷೇಕ ನಡೆದಿವೆ.ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು.
ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಬಳಿಕ ಶ್ರೀಗಳ ಕಂಚಿನ ಪ್ರತಿಮೆ ಮೆರವಣಿಗೆ ಮಾಡಲಾಯಿತು. ಬಳಿಕ ಶ್ರೀಗಳ 115ನೇ ಜನ್ಮದಿನೋತ್ಸವದ ಅಂಗವಾಗಿ 115 ಮಕ್ಕಳಿಗೆ ನಾಮಕರಣ ಶಾಸ್ತ್ರವನ್ನು ಸಹ ನೆರವೇರಿಸಲಾಯಿತು
ಸಿದ್ಧಗಂಗಾ_ ಮಠದಲ್ಲಿ ಇಂದು ಬೆಳಗ್ಗೆ 11 ಗಂಟೆಯ ವೇಳೆಗೆ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗುತ್ತಿದ್ದು ವಿಶೇಷ ಭದ್ರತೆ ಒದಗಿಸಲಾಗಿದೆ. ಅಮಿತ್ ಶಾ ಅವರ ಜೊತೆ ರಾಜ್ಯದ ಬಿಜೆಪಿ ನಾಯಕರು, ಮುಖ್ಯಮಂತ್ರಿಗಳು ಭಾಗವಹಿಸುತ್ತಿದ್ದು ಭದ್ರತೆಗಾಗಿ 2 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ