ನಾಯಕ ನಟ ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರ “ರಾಜಮಾರ್ತಾಂಡ” ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ಸಿನಿಮಾತಂಡ ಹೇಳಿಕೊಂಡಿದೆ.ರಾಜಾ ಮಾರ್ತಾಂಡ ಸಿನಿಮಾದ ಪೋಸ್ಟರ್ ಮೈಸೂರಿನಲ್ಲಿ ಬಿಡುಗಡೆಯಾಗಿದೆ.
ಕೆಜಿಎಫ್ 2 ಬಿಡುಗಡೆ ದಿನವೇ ಓಟಿಟಿಗೆ ಎಂಟ್ರಿಕೊಡಲಿದೆ ಪವರ್ ಫುಲ್ ‘ಜೇಮ್ಸ್’
ಈ ಸಂದರ್ಭದಲ್ಲಿ DCP ಪ್ರಕಾಶ್ ಗೌಡ್ರು ಹಾಗೂ ಡಿ ಆರ್ ಸಿ M.D ಶ್ಯಾಮಲ ಅವರು ಉಪಸ್ಥಿತರಿದ್ದರು. ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ ಚಿತ್ರೀಕರಣ ಪೂರ್ತಿಯಾಗಿತ್ತು.
ಚಿರಂಜೀವಿ ಸರ್ಜಾ ಅವರ ಡಬ್ಬಿಂಗ್ ಅನ್ನು ಧ್ರುವ ಸರ್ಜಾ ನಡೆಸಿಕೊಡಲಿದ್ದಾರೆ ಎನ್ನುವುದು ವಿಶೇಷ. ಗೀತರಚನೆಕಾರರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಪ್ರಣವ್ ಗೌಡ, ಎನ್. ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.
ಯಶ್ ‘ಕೆಜಿಎಫ್ 2’ ಸಿನಿಮಾಗೆ ಬುಕ್ಕಿಂಗ್ ಆರಂಭ: ಮೊದಲ ಹಂತದಲ್ಲೇ ದಾಖಲೆ ಬರೆದಿದ್ದೆಲ್ಲಿ?
ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ