ಮೈಸೂರು :
ನಗರದ ರಾಮಕೃಷ್ಣ ನಗರದಲ್ಲಿ ಶುಕ್ರವಾರ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಫುಟ್ಬಾಲ್ ಆಡಿ, ಗೋಲ್ ಬಾರಿಸಿದ್ದಾರೆ.ಮೈಸೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಆಯೋಜಿಸಿರುವ ರಾಜೀವ್ ಗಾಂಧಿ ಕಪ್ ಫುಟ್ ಬಾಲ್ ಟೂರ್ನಿಯನ್ನು ಸಿದ್ದರಾಮಯ್ಯ ಉದ್ಘಾಟಿಸಿದರು.
ಪಂಚೆ ಎತ್ತಿ ಕಟ್ಟಿ ಕಿಕ್ ಬಾರಿಸುವ ಮೂಲಕ ಫುಟ್ ಬಾಲ್ ಆಟಕ್ಕೆ ಚಾಲನೆ ನೀಡಿದರು. ಸಿದ್ದರಾಮಯ್ಯ ಕಿಕ್ ಬಾರಿಸುವ ವೇಳೆ ನೆರೆದಿದ್ದ ಕಾರ್ಯಕರ್ತರು ಚಪ್ಪಾಳೆ ತಟ್ಟಿ ಹುರಿದುಂಬಿಸಿದರು. ಈ ವೇಳೆ ಸಿದ್ದರಾಮಯ್ಯ ಬಾರಿಸಿದ ಕಿಕ್ ನೇರವಾಗಿ ಗೋಲ್ ಸೇರಿತು.
ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಗೆಲುವು ? ಆರ್ ಸಿಬಿ – ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್
ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮಂಜುನಾಥ್, ಅನಿಲ್ ಚಿಕ್ಕಮಾದು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ, ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ವಿಜಯಕುಮಾರ್ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ