ಬೆಂಗಳೂರು:
ಶೇ.40ರಷ್ಟು ಕಮೀಷನ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಿಜಾಬ್, ಹಲಾಲ್ನಂತ ಧರ್ಮ ಸಂಕಟವನ್ನು ಪ್ರಮುಖವಾಗಿ ಇರಿಸಿಕೊಂಡು ಆಡಳಿತಾರೂಢ ಬಿಜೆಪಿ ವಿರುದ್ಧ ಮುಗಿಬೀಳುತ್ತಿದ್ದ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಗೆ ಗುತ್ತಿಗೆದಾರ ಸಂತೋಷ್ ಕೆ.ಪಾಟೀಲ್ ಆತ್ಮಹತ್ಯೆ ಪ್ರಕರಣ ಮತ್ತೊಂದು ಅಸ್ತ್ರ ಸಿಕ್ಕಿದೆ. ಈ ಪ್ರಕರಣದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು, ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಡ ಹೇರಲಾರಂಭಿಸಿದೆ.
ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡುವೆ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕೈ ಪಾಳಯದ ದಿಗ್ಗಜರು, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
CSK vs RCB, IPL 2022: ಬೆಂಗಳೂರು vs ಚೆನ್ನೈ: ಐಪಿಎಲ್ನಲ್ಲಿಂದು ರಣ ರೋಚಕ ಕದನ
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಆತ್ಮಹತ್ಯೆ ಆಗಿರುವ ವ್ಯಕ್ತಿ ತನ್ನ ಸಾವಿಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಕೂಡಲೇ ಆರೋಪ ಹೊತ್ತಿರುವ ಸಚಿವ ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿ ಕೊಲೆ ಪ್ರಕರಣ ದಾಖಲಿಸಿ ಬಂಧಿಸಬೇಕು. ಕೂಡಲೇ ಆತನನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಯಾರ ರಕ್ಷಣೆ ಮಾಡಬಾರದು. ಕೇವಲ ಮೌಖಿಕವಾಗಿ ತನಿಖೆ ಮಾಡುತ್ತೇವೆ, ಸತ್ಯಾಂಶ ತಿಳಿಯುತ್ತೇವೆ ಎಂದು ಕಾಲಹರಣ ಮಾಡಬಾರದು. ಕೂಡಲೇ ಎಫ್ಐಆರ್ ದಾಖಲಿಸಿ, ಈಶ್ವರಪ್ಪನನ್ನು ಬಂಧಿಸಬೇಕು.
ಈ ಹಿಂದೆ ಸಚಿವರ ವಿರುದ್ಧದ ಪ್ರಕರಣದಲ್ಲಿ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಬಿ ರಿಪೋರ್ಟ್ ಹಾಕಿ ರಕ್ಷಣೆ ಮಾಡಿದೆ. ಈ ಪ್ರಕರಣದಲ್ಲಿ ಆ ರೀತಿ ಮಾಡಬಾರದು. ಇದು ಕೇವಲ ಆತ್ಮಹತ್ಯೆ ಪ್ರಕರಣವಲ್ಲ. ಇದೊಂದು ಕೊಲೆ, ಭ್ರಷ್ಟಾಚಾರ ಪ್ರಕರಣ. ಈ ಸಾವಿಗೆ ಕಾರಣ ಇಡೀ ರಾಜ್ಯಕ್ಕೆ ತಿಳಿದಿದೆ. ಹೀಗಾಗಿ ಈಗ ರಾಜ್ಯದಲ್ಲಿ ಕಾನೂನನ್ನು ಯಾವ ರೀತಿ ಜಾರಿಗೆ ತರಲಾಗುತ್ತದೆ ಎಂಬುದಷ್ಟೇ ಈಗ ಉಳಿದಿರುವ ವಿಚಾರ ಎಂದರು.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದೇ ಮಾದರಿಯನ್ನು ಸಚಿವ ಈಶ್ವರಪ್ಪ ಅನುಸರಿಸಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಒತ್ತಾಯಿಸಿದರು. ಅಲ್ಲದೇ, ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.
ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮ ಮುಖ್ಯ ಗುರಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ