ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ

ಬೆಂಗಳೂರು:

‘ಕಾಂಗ್ರೆಸ್ ನಿಯೋಗ ಇಂದು ಘನತೆವೆತ್ತ ರಾಜ್ಯಪಾಲರನ್ನು ಭೇಟಿ ಮಾಡಿ, 40% ಕಮಿಷನ್ ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಭ್ರಷ್ಟಾಚಾರ ಪ್ರಕರಣ ದಾಖಲಿಸಿ, ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಮನವಿ ಸಲ್ಲಿಸಿದೆ.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಈ ಪ್ರಕರಣ ಕಪ್ಪುಚುಕ್ಕೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೊದಲಿಂದಲೂ ಉತ್ತಮ ಆಡಳಿತ ನೀಡುತ್ತಾ ಬಂದಿದೆ. ಆದರೆ ಈಗ ಬಿಜೆಪಿ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರ ವಿರುದ್ಧ ಗುತ್ತಿಗೆದಾರರ ಸಂಘ ಧ್ವನಿ ಎತ್ತಿದೆ. ಇದಕ್ಕೆ ಬಿಜೆಪಿ, ಹಿಂದೂವಾಹಿನಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಚಿವ ಈಶ್ವರಪ್ಪ ಭ್ರಷ್ಟಾಚಾರದ ಬಗ್ಗೆ ಕೇಂದ್ರ ಸಚಿವರು, ಬಿಜೆಪಿ ರಾಷ್ಟ್ರೀಯ ನಾಯಕರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಸಾಕ್ಷಿಯಾಗಿದೆ.

ಕಾಂಗ್ರೆಸ್ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಸಲ್ಲಿಸಿದ ಮನವಿ ಪತ್ರ

ಈಗ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡು ತನ್ನ ಸಾವಿಗೆ ಸಚಿವರೇ ಕಾರಣ ಎಂದು ಬರೆದಿಟ್ಟಿದ್ದಾರೆ. ರಾಜ್ಯದಲ್ಲಿ ಗುತ್ತಿಗೆದಾರರಿಂದ 40% ಕಮಿಷನ್ ಗಾಗಿ ಸರ್ಕಾರದ ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಆಗ್ರಹಿಸುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರಧಾನಿಗೆ ಪತ್ರ ಬರೆದಿದ್ದರು. ಈ ವಿಚಾರ ಬಹಿರಂಗ ಪಡಿಸಲು 40% ಕಮಿಷನ್ ಭ್ರಷ್ಟಾಚಾರದ ಬಗ್ಗೆ ಚರ್ಚೆ ಆಗಬೇಕು ಎಂದು ಅಧಿವೇಶನದಲ್ಲಿ ಗೊತ್ತುವಳಿ ಮಂಡನೆ ಮಾಡಿದರೂ ಚರ್ಚೆಗೆ ಅವಕಾಶ ನೀಡದೆ ವಜಾಗೊಳಿಸಿದರು. ಬಹುಶಃ ಆ ಚರ್ಚೆ ಆಗಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ, ಸಂತೋಷ್ ಪಾಟೀಲ್ ಆತ್ಮಹತ್ಯೆ ಆಗುತ್ತಿರಲಿಲ್ಲ ಎಂದು ಭಾವಿಸುತ್ತೇನೆ.

ನಾವು ಎಷ್ಟೇ ಮನವಿ, ಆಗ್ರಹ ಮಾಡಿದರೂ ಸರಕಾರ ಯಾವುದೇ ತನಿಖೆ ಮಾಡಲಿಲ್ಲ. ಕ್ರಮ ಕೈಗೊಳ್ಳಲಿಲ್ಲ.ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬ ಸದಸ್ಯರು ಹಾಗೂ ಅವರ ಪತ್ನಿಯ ನೋವನ್ನು ಎಲ್ಲರೂ ನೋಡುತ್ತಿದ್ದೀರಿ. ಸಂತೋಷ್ ಬಿಜೆಪಿಯ ವರಿಷ್ಠರನ್ನು ಭೇಟಿ ಮಾಡಲು ಉಡುಪಿಗೆ ಹೋಗಿದ್ದ ಎಂದು ಮಾಧ್ಯಮಗಳ ವರದಿ ಬಂದಿವೆ. ತನಗೆ ಯಾರಿಂದಲೂ ನ್ಯಾಯ ಸಿಗುವ ಸ್ಪಂದನೆ ಇಲ್ಲದ ಕಾರಣಕ್ಕೆ ಆತ ನೊಂದು ಭ್ರಷ್ಟಾಚಾರಕ್ಕೆ ಕಾರಣರಾದ ಸಚಿವರ ಹೆಸರು ಬರೆದು ಸಾವಿಗೆ ಶರಣಾಗಿದ್ದಾನೆ.

ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವಿರುದ್ಧ ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣು!

ರಾಜ್ಯದಲ್ಲಿ ಇರುವ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆಯೇ ಹೊರತು ಹೆಚ್ಚಿನದಾಗಿ ಏನನ್ನೂ ಕೇಳುತ್ತಿಲ್ಲ. ಸಾಮಾನ್ಯ ಜನರ ಮೇಲೆ ಹೇಗೆ ಪ್ರಕರಣ ದಾಖಲಾಗಿ ಕ್ರಮ ಜರುಗಿಸಲಾಗುತ್ತದೆಯೋ ಅದೇ ರೀತಿ ಇಲ್ಲೂ ಕ್ರಮ ಜರುಗಿಸಬೇಕು.

ಸಚಿವ ಈಶ್ವರಪ್ಪ ರಾಜ್ಯ ರಾಜಕೀಯದಲ್ಲಿ ಭ್ರಷ್ಟಾಚಾರದ ಪಿತಾಮಹ. ಕಳೆದ ಬಾರಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅವರ ಮನೆಯಲ್ಲಿ ನೋಟು ಎಣಿಸುವ ಯಂತ್ರಗಳು ಸಿಕ್ಕಿದ್ದವು. ಅವರ ವಿರುದ್ಧ ಈಗ ಅವರದೇ ಪಕ್ಷದ ಕಾರ್ಯಕರ್ತ 40% ಕಮಿಷನ್ ಆರೋಪ ಮಾಡಿದ್ದಾನೆ.

ಪ್ರಕರಣದಲ್ಲಿ ಎಫ್ ಐಆರ್ ದಾಖಲಾಗಿದ್ದು, ಅವರ ಬಂಧನ ಆಗಬೇಕು. ಈ ಎಫ್ಐಆರ್ ಆಧಾರದ ಮೇಲೆ ಅವರನ್ನು ಬಂಧಿಸಬೇಕು. ಈ ಪ್ರಕರಣದ ವಿಚಾರಣೆಯನ್ನು ಯಾರು ಮಾಡುತ್ತಾರೋ ಮಾಡಲಿ. ಆದರೆ ಆತ್ಮಹತ್ಯೆಗೆ ಪ್ರಚೋದನೆ ಜತೆಗೆ ಭ್ರಷ್ಟಾಚಾರ ಪ್ರಕರಣ ದಾಖಲಿಸಿ ವಿಚಾರಣೆ ಮಾಡಬೇಕು.

ಸೈಬರ್ ಭದ್ರತಾ ನೀತಿ: ಸರಕಾರಕ್ಕೆ ನೆರವು ನೀಡಲು ಐಬಿಎಂ ಆಸಕ್ತಿ ಕೃಷ್ಣರಾಜೇಂದ್ರ ಎಂಜಿನಿಯರಿಂಗ್ ಕಾಲೇಜು ಅಭಿವೃದ್ಧಿಗೆ ಐಬಿಎಂ ಆಸಕ್ತಿ

ಬಿಜೆಪಿಯವರು ಈಶ್ವರಪ್ಪ ಅವರನ್ನು ಇಟ್ಟುಕೊಳ್ಳುತ್ತಾರೋ ಅಥವಾ ವಜಾ ಮಾಡುತ್ತಾರೋ ಅದು ಮುಂದಿನ ವಿಚಾರ. ಆದರೆ ಕೂಡಲೇ ಅವರ ಬಂಧನವಾಗಬೇಕು. ಹೀಗಾಗಿ ರಾಜ್ಯಪಾಲರಿಗೆ ನಮ್ಮ ಮನವಿ ನೀಡಿದ್ದೇವೆ.

ನಮ್ಮ ಮನವಿ ಸಲ್ಲಿಕೆಗೆ ಸಮಯಾವಕಾಶ ಕೊಟ್ಟ ರಾಜ್ಯಪಾಲರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯಪಾಲರು ನಿನ್ನೆ ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳ ಜತೆ ಮಾತನಾಡಿದ್ದಾರೆ. ಸಚಿವರು ತಮಗೆ ಆತ ಯಾರು ಎಂದು ಗೊತ್ತೇ ಇಲ್ಲ ಎಂದಿದ್ದಾರಂತೆ. ಮಾಧ್ಯಮದವರು ಈಶ್ವರಪ್ಪ ಹಾಗೂ ಮೃತ ಸಂತೋಷ್ ಜತೆಯಾಗಿರುವ ಭಾವಚಿತ್ರಗಳನ್ನು ಪ್ರಕಟಿಸಿ, ಅವರ ಸುಳ್ಳನ್ನು ಬಯಲು ಮಾಡಿದ್ದಾರೆ.

ಕೆಪಿಎಸ್‍ಸಿ ಸದಸ್ಯರಾಗಿ ಬಿ.ವಿ ಗೀತಾ ನೇಮಕ

ನಾವು ಈ ಹೋರಾಟವನ್ನು ಇಲ್ಲಿಗೆ ಬಿಡುವುದಿಲ್ಲ. ಬೆಂಗಳೂರಿನಲ್ಲಿ ಹೋರಾಟ ಮಾಡಬಾರದು ಎಂದು ತೀರ್ಪು ಇದ್ದರೂ ಸರಿ. ಈ ಹೋರಾಟ ಜನರ ಆಸ್ತಿ, ನಾವು ಶಿಕ್ಷೆ ಅನುಭವಿಸಿದರೂ ಸರಿ ಹೋರಾಟ ಮಾಡಿಯೇ ತೀರುತ್ತೇವೆ. ಭ್ರಷ್ಟಾಚಾರ ರಹಿತ ರಾಜ್ಯ ಮಾಡುವುದು ಕಾಂಗ್ರೆಸ್ ಪಕ್ಷದ ನಿಲುವು. ಇದಕ್ಕೆ ಎಲ್ಲರ ಸಹಕಾರ ಬೇಕಿದೆ.’

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link