ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ರೇಸ್ ಕೋರ್ಸ್ ರಸ್ತೆಯಲ್ಲಿ ಗುರುವಾರ ಬಂಧಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಧ್ರುವನಾರಾಯಣ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಗೋವಿಂದರಾಜ್ ಮತ್ತಿತರರು ಬಂಧನಕ್ಕೆ ಒಳಗಾದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿ : ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಪ್ರಧಾನಿ ಮೋದಿ, ರಾಹುಲ್
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ