ಕಾಂಗ್ರೆಸ್ ಭವನದಲ್ಲಿ ಡಿ.ಕೆ. ಶಿವಕುಮಾರ್ ಅವರು ಅಂಬೇಡ್ಕರ್ ಜಯಂತಿ ಕುರಿತು ಮಾಧ್ಯಮಗಳಿಗೆ ನೀಡಿದ ಮಾಹಿತಿ

ಇಂದು ಬಾಬಾ ಸಾಹೇಬ್ ಕಾಂಗ್ರೆಸ್ ಭವನದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ ಮಾಡಲಾಗುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಪ್ರದೇಶ ಕಾಂಗ್ರೆಸ್ ವತಿಯಿಂದ ಮಹದೇವಪುರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪ್ರಜಾಪ್ರಭುತ್ವ, ಸಂವಿಧಾನ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿಕೊಟ್ಟ ಭ್ರಷ್ಟಾಚಾರ ನಿರ್ಮೂಲನ ಪಾಠ, ಪಕ್ಷ ಹಾಗೂ ದೇಶದ ನೀತಿಗೆ ಅನುಗುಣವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಮುಖ್ಯಮಂತ್ರಿಗಳ ನಿವಾಸಕ್ಕೆ ಘೆರಾವ್ ಹಾಕಲು ನಿರ್ಧರಿಸಿದ್ದೇವೆ. ಈ ಹೋರಾಟವನ್ನು ದೊಡ್ಡ ಮಟ್ಟದಲ್ಲಿ ಮಾಡಬೇಕಾದ ಅನಿವಾರ್ಯತೆ ಇದ್ದರೂ ಕೋರ್ಟ್ ನಿರ್ಬಂಧವಿದೆ. ಆದರೂ ದೇಶ ಹಾಗೂ ರಾಜ್ಯಕ್ಕೆ ನ್ಯಾಯ ಒದಗಿಸಿ, ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರು ಕಿತ್ತೊಗೆಯಬೇಕಿದೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್‌ ಅವರ 131ನೇ ಜಯಂತಿ : ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಪ್ರಧಾನಿ ಮೋದಿ, ರಾಹುಲ್

ಮುಖ್ಯಮಂತ್ರಿಗಳು ಈ ಎಲ್ಲ ವಿಚಾರದಲ್ಲೂ ಭಾಗಿಯಾಗಿದ್ದಾರೆ ಎಂದು ನಾವು ನೇರ ಆರೋಪ ಮಾಡಬೇಕಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಇದ್ದರೂ ಈ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ಮೃತನ ಮರಣ ಸಂದೇಶ, ಮೃತನ ಸಹೋದರ, ಪತ್ನಿ, ತಾಯಿ ಎಲ್ಲರೂ ಭ್ರಷ್ಟಾಚಾರ ಕಿರುಕುಳದ ಆರೋಪ ಮಾಡಿದ್ದಾರೆ.

ಅಂಗೈ ಉಣ್ಣಿಗೆ ಕನ್ನಡಿ ಬೇಕೇ ಎನ್ನುವಂತೆ ಆರೋಪಿ ಸಚಿವರಿಂದಾಗಿಯೇ ಈ ಪ್ರಕರಣ ನಡೆದಿವೆ. ಹೀಗಾಗಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ ಬಂಧಿಸಬೇಕು, ಜತೆಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಈ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತದೆ.ಇಂದು ಮುಖ್ಯಮಂತ್ರಿಗಳ ಮನೆಗೆ ಘೆರಾವ್ ಹಾಕಲಾಗುವುದು, ನಾಳೆಯಿಂದ ರಾಜ್ಯಾದ್ಯಂತ ನಮ್ಮ ಹೋರಾಟ ಮುಂದುವರಿಸಲಾಗುವುದು.

ಪ್ರಾಥಮಿಕ ತನಿಖೆ ಆಗುವವರೆಗೂ ಈಶ್ವರಪ್ಪ ರಾಜೀನಾಮೆ ಪಡೆಯಲ್ಲ: ಸಿಎಂ ಬೊಮ್ಮಾಯಿ

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link