ಬೆಂಗಳೂರು:
ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ನಿನ್ನೆ ಸಂಜೆಯಿಂದ ರಾತ್ರಿಯವರೆಗೂ ಸುರಿದ ಮಳೆಯಿಂದ ಎಲ್ಲೆಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ತುಂತುರುಮಳೆಯಾಗಲಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾರೀ ಮಳೆಯಿಂದ ತುಮಕೂರು, ಚಾಮರಾಜನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಬಿರುಗಾಳಿಗೆ ಹಲವೆಡೆ ಚಾವಣಿಗೆ ಅಳವಡಿಸಿದ್ದ ತಗಡಿನ ಶೀಟುಗಳು ಹಾರಿಹೋಗಿವೆ. ಸಿಡಿಲು ಬಡಿದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ತಮಿಳುನಾಡು ತೀರ ಪ್ರದೇಶದಲ್ಲಿ ಸೃಷ್ಟಿಯಾಗಿರುವ ಸೈಕ್ಲೋನ್ ಪ್ರಭಾವದಿಂದಾಗಿ ಕರ್ನಾಟಕದ ಕರಾವಳಿ ಹಾಗೂ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರ್ನಾಟಕದಲ್ಲಿ ಪೂರ್ವ ಮುಂಗಾರು ತುಸು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ ಸೇರಿದಂತೆ ಕೆಲವು ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಕೆಲವು ಕಡೆ ಏ.18ರವರೆಗೆ ಮಳೆಯಾಗುವ ಸಂಭವವಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ತುಮಕೂರಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.
IPL 2022 : ಯಾರೇ ಗೆದ್ರು, ಯಾರೇ ಸೋತ್ರು ಲೆಕ್ಕಕ್ಕಿಲ್ಲ: ರಾಜಸ್ಥಾನ್ ರಾಯಲ್ಸ್ ತಂಡವೇ ಟಾಪ್
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನಗಳು ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಮಂಡ್ಯ, ಮೈಸೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ಸೇರಿದಂತೆ ಮಂಗಳೂರು ನಗರದಲ್ಲೂ ಭಾರೀ ಮಳೆಯಾಗಿದೆ. ಭಾರೀ ಗಾಳಿ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ವಿದ್ಯುತ್ ಕಂಬ ರಸ್ತೆಗೆ ಬಿದ್ದಿದೆ. ಬಂಗಾಳ ಕೊಲ್ಲಿಯಿಂದ ಈಶಾನ್ಯ ರಾಜ್ಯಗಳಿಗೆ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಬಲವಾದ ನೈಋತ್ಯ ಮಾರುತಗಳ ಪ್ರಭಾವದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಕೆಜಿಎಫ್ 2 ವಿಮರ್ಶೆ: ವಿಲನ್ ಗಳ ಬಿರುಗಾಳಿ ಎದುರು ನಿಂತ ರಾಕಿ ಸುಲ್ತಾನನೆಂಬ ಚಂಡಮಾರುತ
ಭಾರತೀಯ ಹವಾಮಾನ ಇಲಾಖೆಯು ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ‘ಆರೆಂಜ್ ಅಲರ್ಟ್’ ನೀಡಿದೆ. ಏ. 16ರವರೆಗೆ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತದ ಚಲನೆ ಉಂಟಾಗಲಿದೆ. ಮುಂದಿನ 4 ದಿನಗಳಲ್ಲಿ ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಅಥವಾ ಮಿಂಚಿನ ಜೊತೆಗೆ ವ್ಯಾಪಕವಾದ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಆಂಧ್ರಪ್ರದೇಶದ ಕರಾವಳಿಯಲ್ಲೂ ಮಳೆಯಾಗಲಿದೆ. ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳದಲ್ಲಿ ವಿಪರೀತ ಮಳೆಯಾಗಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಿಕ್ಕಿಂ ಮತ್ತು ಕೇರಳದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಚದುರಿದ ಮಳೆ, ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಪಿಟಿಸಿಎಲ್ ಕಾಯ್ದೆಯ ಅನುಷ್ಠಾನಕ್ಕೆ ಸರ್ಕಾರ ಸಿದ್ದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತಮಿಳುನಾಡು, ಕರ್ನಾಟಕ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಒಡಿಶಾ, ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ಜಾರ್ಖಂಡ್ ಮತ್ತು ಬಿಹಾರದಲ್ಲಿ ಬಿಸಿಗಾಳಿ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ