ಬೆಂಗಳೂರು :
ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 75 ಯುನಿಟ್ ತನಕ ಉಚಿತ ವಿದ್ಯುತ್, ಸ್ವಯಂ ಉದ್ಯೋಗಕ್ಕೆ ನೀಡುವ ಸಹಾಯಧನವನ್ನು 50 ಸಾವಿರ ರೂ.ನಿಂದ 1 ಲಕ್ಷ ರೂ.ವರೆಗೆ ಹೆಚ್ಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಬರೆದ ‘ಕೆಜಿಎಫ್ ಚಾಪ್ಟರ್ 2’.. ಫಸ್ಟ್ ಡೇ ಕಲೆಕ್ಷನ್ ಏಷ್ಟು ಕೋಟಿ ?
ವಿಧಾನಸೌಧದದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಅಂಬೇಡ್ಕರರ 131 ನೇ ಜನ್ಮದಿನಾಚರಣೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಸ್ಪೂರ್ಥಿ ಭವನ ಕಲ್ಯಾಣ ಶಂಕುಸ್ಥಾಪನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಪರಭಾರೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಸುಪ್ರೀಂಕೋರ್ಟ್ ಆದೇಶಿಸಿದೆ. ರಾಜ್ಯದಲ್ಲೂ ಈ ಕಾಯ್ದೆ ಜಾರಿಗೆ ತರಲು ಸರ್ಕಾರ ಸಿದ್ದವಿದೆ ಎಂದರು.
ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ: ಮುಕ್ತ ತನಿಖೆಯಾಗಲು ಬಿಡಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇನ್ನು ಪೌರಕಾರ್ಮಿಕರಿಗೆ ಸರ್ಕಾರ ವಿಶೇಷ ಅನುದಾನ ಒದಗಿಸಲಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಸರ್ವರಿಗೂ ಆರೋಗ್ಯ ಕಾರ್ಡ್ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ