ಬೆಂಗಳೂರು:
ಬೆಂಗಳೂರು, ಏಪ್ರಿಲ್ 21, ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳಾಗಿ ಹೆಚ್.ಸಿ.ಸತ್ಯನ್, ನಿವೃತ್ತ ಐ.ಎ.ಎಸ್ ಅಧಿಕಾರಿ ಎಸ್. ಪಿ. ಬೊಮ್ಮನಹಳ್ಳಿ ಹಾಗೂ ರವೀಂದ್ರ ಗುರುನಾಥ ಡಾಕಪ್ಪ ಅವರು ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮಾಹಿತಿ ಆಯೋಗದ ಹಂಗಾಮಿ ಆಯುಕ್ತರಾದ ಸಂತೋಷ್ ಎಲ್ ಪಾಟೀಲ್ ಅವರು ಸೇರಿದಂತೆ ನೂತನ ಸದಸ್ಯರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಕಾರ್ಯಕ್ರಮದ ಸ್ವಾಗತ ಹಾಗೂ ವಂದನಾರ್ಪಣೆ ನೆರವೇರಿಸಿದರು.
ಭಾರತದ ಬ್ರಹ್ಮೋಸ್ ಕ್ಷಿಪಣಿಯ ‘ಡಬಲ್ ಹಿಟ್’ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ