ನವದೆಹಲಿ:
ನವದೆಹಲಿ, ಏಪ್ರಿಲ್ 21; ಭಾರತದಲ್ಲಿ 2,380 ಹೊಸ covid ಪ್ರಕರಣಗಳು ದಾಖಲಾಗಿವೆ. ಕಳೆದ ಒಂದು ವಾರದಿಂದ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.
ಗುರುವಾರದ ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ ದೇಶದಲ್ಲಿ 2,380 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 13,433 ಆಗಿದೆ.ಇದುವರೆಗೂ 4,25,14,479 ಜನರು ಗುಣಮುಖಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇದುವರೆಗೂ 5,22,062 ಜನರು ಸಾವನ್ನಪ್ಪಿದ್ದಾರೆ.
ಭಾರತ ಪ್ರವಾಸ: ಗಾಂಧಿ ಆಶ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದು ಹೀಗೆ
ಭಾರತದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,30,49,974 ಆಗಿದೆ. 24 ಗಂಟೆಯಲ್ಲಿ ದೇಶದಲ್ಲಿ 56 ಸೋಂಕಿತರು ಮೃತಪಟ್ಟಿದ್ದಾರೆ. ಬುಧವಾರ ತಮಿಳುನಾಡಿನಲ್ಲಿ 27, ಕರ್ನಾಟಕ 61, ಛತ್ತೀಸ್‌ಗಢ 5, ತೆಲಂಗಾಣ 20 ಹೊಸ ಪ್ರಕರಣಗಳು ದಾಖಲಾಗಿವೆ.
ಪಶ್ಚಿಮ ಬಂಗಾಳ 28, ಗುಜರಾತ್ 13, ಮಿಜೋರಾಂ 125 ಹೊಸ ಪ್ರಕರಣಗಳು ದಾಖಲಾಗಿವೆ. ಹರ್ಯಾಣದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತದೇ ಇದೆ. ಬುಧವಾರ 310 ಹೊಸ ಪ್ರಕರಣ ದಾಖಲಾಗಿದೆ.
ಐಪಿಎಲ್ ಪಾಯಿಂಟ್ ಟೇಬಲ್ ಹೇಗಿದೆ?. ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
ದೆಹಲಿಯಲ್ಲಿ 1009 ಹೊಸ ಕೋವಿಡ್ ಪ್ರಕರಣಗಳು ಬುಧವಾರ ದಾಖಲಾಗಿದೆ. ವಿವಿಧ ರಾಜ್ಯಗಳಲ್ಲಿ ಹೊಸ ಪ್ರಕರಣಗಳು ದಾಖಲಾಗುತ್ತಿರುವ ಪರಿಣಾಮ ಹಲವು ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಒಡಿಶಾ ಮತ್ತು ಬಿಹಾರ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿವೆ.
ʼಅಂತಾರಾಷ್ಟ್ರೀಯ ಕ್ರಿಕೆಟ್ʼಗೆ ವೆಸ್ಟ್ ಇಂಡೀಸ್ ಆಟಗಾರ ʼಕೀರನ್ ಪೊಲಾರ್ಡ್ʼ ನಿವೃತ್ತಿ ಘೋಷಣೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
