ಬೆಂಗಳೂರು:
ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ರಾಜ್ಯಗಳಲ್ಲಿ ಇನ್ನು ಕೆಲವು ದಿನ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಾಡುತ್ತಿದೆ ಕಲ್ಲಿದ್ದಲು ಕೊರತೆ, ವಿದ್ಯುತ್ ಅಭಾವ ಭೀತಿ; 81 ಸ್ಥಾವರಗಳಲ್ಲಿ ನಿಶ್ಚಿತ ದಾಸ್ತಾನಿಲ್ಲ
ಇಂದು ಕೂಡ ಕರ್ನಾಟಕದ ಹಲವೆಡೆ ಗುಡುಗು-ಮಿಂಚು, ಮಳೆಯ ಸಾಧ್ಯತೆ ಇದೆ. ಏ. 23, ಹಾಗೂ ಏ.24ರಂದು ಕರಾವಳಿ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಪಶ್ಚಿಮ ಘಟ್ಟದ ಒಂದೆರಡು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಏ.25ರಂದು ಕರಾವಳಿಯ ಎಲ್ಲಾ ಜಿಲ್ಲೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ಪುನೀತ್ ಧ್ವನಿಯಲ್ಲಿ `ಜೇಮ್ಸ್’ ರೀ ಎಂಟ್ರಿ!
ಕರ್ನಾಟಕ ಮಾತ್ರವಲ್ಲದೆ ಬೇರೆ ರಾಜ್ಯಗಳಲ್ಲೂ ಮಳೆ ಇನ್ನು ಕೆಲ ದಿನಗಳ ಕಾಲ ಮುಂದುವರೆದಿದೆ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ ಗುಜರಾತ್‌ನಲ್ಲೂ ಮಳೆಯಾಗಲಿದೆ ಅಂತ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶಗಳಲ್ಲಿ ಏಪ್ರಿಲ್ ಇನ್ನೆರಡು ದಿನಗಳು ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಇನ್ನು, ಬೆಂಗಳೂರಿನಲ್ಲಿ 3 ದಿನಗಳ ಕಾಲ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಉತ್ತರ ಒಳನಾಡು, ಪಶ್ಚಿಮ ಘಟ್ಟಗಳ ಒಂದೆರಡು ಕಡೆ ಮಳೆಯಾಗಲಿದೆ ಎಂದು ವರದಿಯಾಗಿದೆ. ಉತ್ತರ ಒಳನಾಡಿನ ಕಲಬುರ್ಗಿ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಧಾರವಾಡ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಗುಡುಗು- ಮಿಂಚಿನೊಂದಿಗೆ ಮಳೆಯಾಗಲಿದೆ.
ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಜಾರ್ಖಂಡ್, ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಬಿಹಾರ, ಪೂರ್ವ ಉತ್ತರ ಪ್ರದೇಶ, ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಮಳೆಯಾಗಲಿದೆ.
ಹಿಜಾಬ್ ವಿವಾದ; ಪಿಯು ಪರೀಕ್ಷೆ ಬರೆಯದೆಯೇ ವಾಪಸ್ ಆದ ವಿದ್ಯಾರ್ಥಿನಿಯರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
